ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್) ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ ೧೫.೯ ಲಕ್ಷ ರೂಪಾಯಿ ಮೌಲ್ಯದ ಇ-ಸಿಗರೇಟ್ ವಶಕ್ಕೆ ಪಡೆಯಲಾಗಿದೆ.
ಇಂದು ಸೋಮವಾರ ಮಲೇಷ್ಯಾದ ಕೌಲಾಲಂಪುರ್‌ನಿಂದ ಮಲೇಷ್ಯಾ ಏರ್‌ಲೈನ್ಸ್ ಎಮ್.ಹೆಚ್ ೧೯೨ ವಿಮಾನದ ಮೂಲಕ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಲಗೇಜ್‌ಗಳನ್ನು ಪರಿಶೀಲನೆ ಮಾಡುವಾಗ ಅಕ್ರಮ ಪತ್ತೆಯಾಗಿದೆ. ೧,೫೯೦ ಇ-ಸಿಗರೇಟ್‌ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಕಸ್ಟಮ್ಸ್ ಕಾಯಿದೆ ೧೯೬೨ ಅಡಿ ಪ್ರಕರಣ ದಾಖಲಿಸಲಾಗಿದೆ.