Friday, April 4, 2025
Google search engine

Homeರಾಜ್ಯಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ವರುಣನ ಸಿಂಚನ: ಹಲವು ಜಿಲ್ಲೆಗಳಲ್ಲಿ ಮಳೆ ಆಗಮನ ಸೂಚನೆ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ವರುಣನ ಸಿಂಚನ: ಹಲವು ಜಿಲ್ಲೆಗಳಲ್ಲಿ ಮಳೆ ಆಗಮನ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಭಾನುವಾರ ಬೆಳ್ಳಂಬೆಳಗ್ಗೆ ಚಳಿ ಮಧ್ಯೆ ವರುಣನ ದರ್ಶನವಾಗಿದೆ. ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿದ್ದು ಈಗ ದಟ್ಟ ಮೋಡ ಕವಿದ ವಾತಾವರಣವಿದೆ.

ಬೆಂಗಳೂರಿನ ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ, ಮೆಜೆಸ್ಟಿಕ್, ವಿಧಾನಸೌಧ, ಜೆಪಿನಗರ, ರಿಚ್​ಮಂಡ್ ವೃತ್ತ, ಟೌನ್​ಹಾಲ್ ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ.

ತಮಿಳುನಾಡಿನ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೇ ರೀತಿ ರಾಜ್ಯದ ಕರಾವಳಿ ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರಗಳಲ್ಲಿ ಕೂಡ ಇನ್ನೊಂದು ವಾರದವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES
- Advertisment -
Google search engine

Most Popular