Friday, April 11, 2025
Google search engine

Homeದೇಶದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪ

ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪ

ದೆಹಲಿ: ದೆಹಲಿ, ಚಂಢೀಗಢ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ.

ಜಮ್ಮು-ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ. ಪಂಜಾಬ್ ​ನ ಮೊಹಾಲಿ, ಹರಿಯಾಣ ಪಂಚಕುಲದಲ್ಲಿ ಭೂಕಂಪ ಸಂಭವಿಸಿದೆ.

ಚಂಡೀಗಢದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಧ್ಯಾಹ್ನ 1.30ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಕಳೆದ ತಿಂಗಳ ಕೊನೆಯಲ್ಲಿ ಅಫ್ಘಾನಿಸ್ತಾನದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದಾಗ ದೆಹಲಿಯಲ್ಲಿ ಕೂಡ ಲಘು ಕಂಪನವಾಗಿತ್ತು. ಯಾವುದೇ ಹಾನಿಯಾಗಿರುವ ಕುರಿತು ವರದಿಯಾಗಿಲ್ಲ.

RELATED ARTICLES
- Advertisment -
Google search engine

Most Popular