ಬೆಂಗಳೂರು : ಶಾಸಕ ಬಿ. ನಾಗೇಂದ್ರ ಆಪ್ತರ ಮನೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಬಿ.ನಾಗೇಂದ್ರ ಅವರ ಆಪ್ತ ಎರ್ರಿಸ್ವಾಮಿ ಸೇರಿದಂತೆ ಕೆಲ ಆಪ್ತ ಸಹಾಯಕರ ಮನೆಗಳ ಮೇಲೆ ಇಡಿ ಅಧಿಕಾರಿಗಲು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವಾಲ್ಮೀಕಿ ಬುಡಕಟ್ಟು ಜನಾಂಗ ಅಭಿವೃದ್ಧಿ ನಿಗಮ ಹಗರಣದ ಆರೋಪದಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರ ನಿವಾಸದ ಮೇಲೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಜಾರಿ ನಿರ್ದೇಶನಾಲಯ ಕೆಲ ದಿನಗಳ ಹಿಂದೆಷ್ಟೇ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿತ್ತು. ಇದೀಗ ಶಾಸಕ ಬಿ.ನಾಗೇಂದ್ರ ಅವರ ಆಪ್ತರ ನಿವಾಸಗಳ ಮೇಲೆ ದಾಳಿ ನಡೆಸಿದೆ.