Friday, April 11, 2025
Google search engine

Homeಅಪರಾಧಇಡಿ ಅಧಿಕಾರಿಗಳ ಸೋಗಿನಲ್ಲಿ ವಂಚಿಸಿದ ಪ್ರಕರಣ: ಆರೋಪಿಗಳ ಬಂಧನ

ಇಡಿ ಅಧಿಕಾರಿಗಳ ಸೋಗಿನಲ್ಲಿ ವಂಚಿಸಿದ ಪ್ರಕರಣ: ಆರೋಪಿಗಳ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ.

ಜನವರಿ 3ರಂದು ರಾತ್ರಿ, ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಈಗಾಗಲೇ ಕೇರಳ ಕೊಲ್ಲಂ ನಿವಾಸಿಗಳಾದ ಅನಿಲ್‌ ಫರ್ನಾಂಡಿಸ್‌, ಸಚ್ಚಿನ್‌ ಟಿ ಎಸ್‌ ಹಾಗೂ ಶಬಿನ್‌ ಎಸ್‌ ಎಂಬವರುಗಳನ್ನು ಬಂಧಿಸಿದ್ದು ಇವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಕುರಿತು ತನಿಖೆ ಮುಂದುವರಿಸಿ ದಿನಾಂಕ:15-02-2025 ರಂದು ಕೃತ್ಯಕ್ಕೆ ಮನೆಯ ಮಾಹಿತಿ ನೀಡಿದ್ದ ಸ್ಥಳಿಯ ಆರೋಪಿ ಕೊಳ್ನಾಡು ಬಂಟ್ವಾಳ ನಿವಾಸಿ ಸಿರಾಜುದ್ದೀನ್‌ (37) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿ, ಆತ ನೀಡಿದ ಮಾಹಿತಿಯ ಅಧಾರದಲ್ಲಿ ಬಂಟ್ವಾಳ ನಿವಾಸಿ ಮೊಹಮ್ಮದ್‌ ಇಕ್ಬಾಲ್‌ (38) ಹಾಗೂ ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್‌ ಅನ್ಸಾರ್‌ (27) ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ಈ ಪ್ರಕರಣದ ತನಿಖೆ‌ ಮುಂದುವರಿದಂತೆ, ದರೋಡೆ ಕೃತ್ಯಕ್ಕೆ ಮೂಲ ಸೂತ್ರದಾರನಾದ ಕೇರಳದ ಶಫೀರ್‌ ಬಾಬು (48) ಎಂಬಾತನನ್ನು ಬಂಧಿಸಲಾಗಿದೆ. ವಿಪರ್ಯಾಸ ಅಂದ್ರೆ ಈತನು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಕೊಡಂಗಲ್ಲೂರು ಪೊಲೀಸ್‌ ಠಾಣೆ ಸಹಾಯಕ ಪೊಲೀಸ್‌ ಉಪ ನಿರೀಕ್ಷಕರಾಗಿದ್ದಾರೆ.

ಈ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್ ಮಾರ್ಗದರ್ಶನದಲ್ಲಿ, ಜಿಲ್ಲಾ ವ್ಯಾಪ್ತಿಯ ಠಾಣೆಗಳಿಂದ ಅಪರಾಧ ಕೃತ್ಯಗಳ ತನಿಖೆಯಲ್ಲಿ ಪರಿಣಿತರಾದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಲಾಗಿದೆ.

RELATED ARTICLES
- Advertisment -
Google search engine

Most Popular