Wednesday, September 3, 2025
Google search engine

Homeಅಪರಾಧಕಾನೂನುಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ: 6 ಐಷಾರಾಮಿ ಕಾರು...

ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ: 6 ಐಷಾರಾಮಿ ಕಾರು ವಶ

ಚಿತ್ರದುರ್ಗ : ವಿದೇಶಿ ಕರೆನ್ಸಿ ಹಾಗು ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಸದ್ಯ ಜಾರಿ ನಿರ್ದೇಶನಾಲಯ (ED) ವಶದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ಅಧಿಕಾರಿಗಳು ಮತ್ತೆ ಇಂದು ದಾಳಿಯನ್ನು ನಡೆಸಿದ್ದು, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಶಾಸಕ ಕೆ.ಸಿ. ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಆರು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅವರ ಮನೆಯಲ್ಲಿರುವ ಐಶಾರಾಮಿ ಕಾರುಗಳ ಬಗ್ಗೆ ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಮನೆ ಮಾತ್ರವಲ್ಲದೇ ಶಾಸಕ ವೀರೇಂದ್ರ ಪಪ್ಪಿಯ ಬ್ಯಾಂಕ್ ಖಾತೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿದ್ದಾರೆ.

ಆಗಸ್ಟ್ 22ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ಮುಂಜಾನೆ 5 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಅಂದು ಪಪ್ಪಿ ಮನೆಯಲ್ಲಿ ಕೋಟಿ ಕೋಟಿ ಹಣ ಜೊತೆ ಚಿನ್ನಾಭರಣ ವಿದೇಶಿ ಕರೆನ್ಸಿಯನ್ನ ಇಡಿ ವಶಕ್ಕೆ ಪಡೆದಿತ್ತು.

ಸತತ 18 ಗಂಟೆಗೂ ಹೆಚ್ಚು ಕಾಲ ಇಡಿ ಅಧಿಕಾರಿಗಳು ಪಪ್ಪಿ ಕೋಟೆಯನ್ನು ಜಾಲಾಡಿದ್ದರು. ಈ ವೇಳೆ 1 ಕೋಟಿ ರೂ ವಿದೇಶಿ ಕರೆನ್ಸಿ ಸೇರಿದಂತೆ ಸುಮಾರು 12 ಕೋಟಿ ರೂ ನಗದು ಪತ್ತೆ ಆಗಿತ್ತು. 6 ಕೋಟಿ ರೂ. ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ, 4 ವಾಹನಗಳು, 17 ಬ್ಯಾಂಕ್ ಅಕೌಂಟ್ಸ್ ಮತ್ತು 2 ಲಾಕರ್ ಜಪ್ತಿ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular