Friday, April 4, 2025
Google search engine

Homeರಾಜಕೀಯಬಿಜೆಪಿ ರಾಜಕೀಯ ದುರುದ್ದೇಶದಿಂದ ಇಡಿಯಿಂದ ಮಾಧ್ಯಮ ಪ್ರಕಟಣೆ ರಿಲೀಸ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ

ಬಿಜೆಪಿ ರಾಜಕೀಯ ದುರುದ್ದೇಶದಿಂದ ಇಡಿಯಿಂದ ಮಾಧ್ಯಮ ಪ್ರಕಟಣೆ ರಿಲೀಸ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಇಡಿ ಅಧಿಕಾರಿಗಳು 300 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿಕೊಂಡಿದ್ದು ಅಲ್ಲದೆ ಪ್ರಕಟಣೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಹೆಸರುಗಳನ್ನು ಉಲ್ಲೇಖಿಸಿತ್ತು ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜಕೀಯ ದುರುದ್ದೇಶದಿಂದ ಇಡಿ ಇಂದ ಪ್ರಕಟಣೆ ರಿಲೀಸ್ ಮಾಡಿಸಿದೆ ಎಂದು ಗಂಭೀರವಾದ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ತನಿಖೆಯ ಬಗ್ಗೆ ಇಡಿ ಮಾಧ್ಯಮ ಪ್ರಕಟಣೆ ವಿಚಾರವಾಗಿ ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. ರಾಜಕೀಯ ಉದ್ದೇಶಪೂರ್ವಕವಾಗಿ ತನಿಖೆ ಮಾಡುತ್ತಿದ್ದಾರೆ 50:50 ಅನುಪಾತ ಸೈಟ್ಗಳನ್ನು ಮುಟ್ಟುಗಳು ಹಾಕಿದ್ದೇವೆ ಅಂತಾರೆ ಆದರೆ ಅದಕ್ಕೂ ನನಗೂ ಸಂಬಂಧ ಇಲ್ಲ ಬಿಜೆಪಿ ಇಡೀಯಿಂದ ಮಾಧ್ಯಮ ಪ್ರಕಟಣೆ ರಿಲೀಸ್ ಮಾಡಿಸಿದೆ ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಇದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇನ್ನು ರಾಜ್ಯದ ಹಲವು ಕಡೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಜನರು ಊರು ಬಿಡುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ನಿಂದ ಕಿರುಕುಳ ಪ್ರಕರಣ ಕುರಿತು ಮೈಕ್ರೋಫೈನಾನ್ಸ್ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಯಾರೇ ಕಿರುಕುಳ ಕೊಟ್ಟರು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

RELATED ARTICLES
- Advertisment -
Google search engine

Most Popular