Friday, April 18, 2025
Google search engine

Homeಸ್ಥಳೀಯಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ, ರಸ್ತೆಗೆ ಆದ್ಯತೆ: ಶಾಸಕ ಎಚ್.ಎಂ.ಗಣೇಶಪ್ರಸಾದ್

ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ, ರಸ್ತೆಗೆ ಆದ್ಯತೆ: ಶಾಸಕ ಎಚ್.ಎಂ.ಗಣೇಶಪ್ರಸಾದ್

ಗುಂಡ್ಲುಪೇಟೆ: ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಹಾಗೂ ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಹಂತ ಹಂತವಾಗಿ ಸೌಲಭ್ಯ ನೀಡಿ, ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ತಿಳಿಸಿದರು.

ತಾಲೂಕಿನ ಪಡಗೂರು ಗ್ರಾಮದ ಸರ್ಕಾರಿ ಶಾಲೆಯ ನೂತನ ಕೊಠಡಿ ಉದ್ಘಾಟಿಸಿ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಮಟ್ಟ ಸುಧಾರಿಸಬೇಕು ಎಂಬ ಉದ್ಧೇಶದಿಂದ ಸರ್ಕಾರ ಹಲವಾರು ಕಾರ್ಯಕ್ರಮ ಜಾರಿಗೆ ತರುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಇದನ್ನು ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸುವ ಮೂಲಕ ಸಾಧನೆಯ ಕಡೆಗೆ ಹೆಚ್ಚಿನ ಗಮನ ನೀಡಿ ಉನ್ನತ ಶಿಕ್ಷಣ ಪಡೆಯಬೇಕು. ಇದರಿಂದ ಮಾತ್ರ ಸಮಾಜದಲ್ಲಿ ಉತ್ತಮ ಸ್ಥಾನಮಾನಗಳಿಸಲು ಸಾಧ್ಯ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ತಿಂಗಳಾಗಿದೆ. ಮುಂದಿನ ಐದು ವರ್ಷಗಳಲ್ಲಿ ಮೂಲಭೂತ ಅವಶ್ಯಕತೆಗಳಾದ ಶಿಕ್ಷಣ ಮತ್ತು ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಲಿದ್ದು, ಹಂತ ಹಂತವಾಗಿ ಗ್ರಾಮಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವ ಮೂಲಕ ಮಾದರಿ ಗ್ರಾಮಗಳನ್ನಾಗಿ ಮಾಡಲು ಶ್ರಮಿಸುವುದಾಗಿ ಹೇಳಿದರು.

ಕ್ಷೇತ್ರಕ್ಕೆ ಅಗತ್ಯವಿರುವ ಕೆಲಸಗಳ ಬಗ್ಗೆ ಈಗಾಗಲೇ ಯೋಜನೆ ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಗುಂಡ್ಲುಪೇಟೆ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ಇದಕ್ಕೆ ಎಲ್ಲರೂ ಹೆಚ್ಚಿನ ರೀತಿಯ ಸಹಕಾರ ನೀಡಬೇಕು. ಭ್ರಷ್ಟಾಚಾರ ರಹಿತ ತಾಲೂಕಾಗಿಸಿ, ಜನರ ಕೆಲಸಗಳು ತೀವ್ರ ಗತಿಯಲ್ಲಿ ಆಗುವ ರೀತಿಯಲ್ಲಿ ಕ್ರಮ ವಹಸಿವುದಾಗಿ ತಿಳಿಸಿದರು.

ಇನ್ನು ಇದಕ್ಕು ಮೊದಲು ಕಬ್ಬಹಳ್ಳಿ ಗ್ರಾಮದಲ್ಲಿರುವ ಶ್ರೀಪಟ್ಟದ ಮಠದ ದಾಸೋಹ ಭವನ ನಿರ್ಮಾಣಕ್ಕೆ 25ಲಕ್ಷ ರೂ. ವೆಚ್ಚದಲ್ಲಿ ಶಾಸಕ ಎಚ್.ಎಂ.ಗಣೇಶಪ್ರಸಾದ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಕಬ್ಬಹಳ್ಳಿ ಮಹೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಮ್ಮ. ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ, ಎಸ್‍ಡಿಎಂಸಿ ಅಧ್ಯಕ್ಷ ಮಲ್ಲು, ಸಂತೋಷ್ ಕುಮಾರ್, ರಾಮಚಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಮೃತ್ಯುಂಜಯ, ಕಬ್ಬಹಳ್ಳಿ ದೀಪು, ಚಂದ್ರಶೇಖರ ಮೂರ್ತಿ, ಪಡುಗೂರು ನಾಗೇಶ್, ಮುಖ್ಯಶಿಕ್ಷಕ ಮಹದೇವು, ಶಿಕ್ಷಕ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯ ಮನು, ರಾಜು, ಪಿಡಿಒ ಮೋಹನ್ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular