ಹನೂರು : ಡಾ.ಬಿ.ಆರ್ ಅಂಬೇಡ್ಕರ್ ಅವರು ಉತ್ತಮ ಶಿಕ್ಷಣವನ್ನು ಪಡೆದುಕೊಂಡು ವಿಶ್ವಕ್ಕೆ ಮಾದರಿಯಾಗಿದ್ದರು. ನಾವೆಲ್ಲರೂ ಸಮಾಜದ ಮುಖ್ಯ ವಾಹಿನಿಗೆ ಬರಬೇಕಾದರೆ ಶಿಕ್ಷಣ ಒಂದೇ ಮಾರ್ಗವಾಗಿದೆ ಎಂದು ಮುಡಿಗುಂಡ ಮಠದ ಶ್ರೀ ಶ್ರೀಕಂಠ ಸ್ವಾಮಿಯವರು ತಿಳಿಸಿದರು.
ತಾಲೂಕಿನ ಬಂಡಳ್ಳಿ ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಪ್ರತಿಯೊಬ್ಬರು ಶಿಕ್ಷಣದ ಜೊತೆಗೆ ಸಹನೆ, ಗುರು ಹಿರಿಯರಿಗೆ, ತಂದೆ ತಾಯಿಂದರಿಗೆ ಗೌರವವನ್ನು ಕೊಡಬೇಕು ಎಂದರಲ್ಲದೆ, ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಸೌಲಭ್ಯವನ್ನು ಕೊಡುತ್ತಿದೆ ಬಂಡಳ್ಳಿ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಉತ್ತಮ ಶಿಕ್ಷಣವನ್ನು ನೀಡಿಕೊಂಡು ಬರುತ್ತಿದೆ ಹಾಗೂ ಬಹಳ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಇನ್ನೂ ಹೆಚ್ಚಿನ ಮಟ್ಟದಲ್ಲಿ ಸರ್ಕಾರಿ ಶಾಲೆಗಳು ಬೆಳೆಯಲಿ ಎಂದು ಆಶಿಸಿದರು.
ಬಳಿಕ ಶಾಸಕ ಎಂ.ಆರ್.ಮಂಜುನಾಥ್ ರವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದಿರಂತಹ ವಿದ್ಯಾರ್ಥಿಗಳು ಇಂದು ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿ ಅಧಿಕಾರಿಗಳಾಗಿದ್ದಾರೆ. ಬಂಡಳ್ಳಿ ಸರ್ಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಶಾಲೆಗೆ 30ಕ್ಕೂ ಹೆಚ್ಚಿನ ಮಕ್ಕಳನ್ನು ಸೇರಿಸುವಲ್ಲಿ ಶಿಕ್ಷಕರು ಹಾಗೂ ಪೋಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಇನ್ನೂ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು ಇದಕ್ಕೆ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಇಡೀ ರಾಜ್ಯದಲ್ಲಿ ಮಾದರಿ ಶಾಲೆಯಾಗಿ ಮುಂದೆ ಬರುತ್ತಿದೆ. ಸರ್ಕಾರ ಮಕ್ಕಳ ವಿದ್ಯಾಭ್ಯಾಸಗೋಸ್ಕರ ಅನೇಕ ಸೌಲಭ್ಯಗಳು ಬರುತ್ತಿದ್ದು ಖಾಸಿಗೆ ಶಾಲೆಗಿಂತ ನಮ್ಮ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದೆ ಇನ್ನು ಹೆಚ್ಚು ಹೆಚ್ಚು ಮಕ್ಕಳಿಗೆ ಶಿಕ್ಷಣ ಕೊಡುವ ಮುಖಾಂತರ ರಾಜ್ಯಕ್ಕೆ ಮಾದರಿ ಶಾಲೆ ಆಗಬೇಕು ಎಂದು ತಿಳಿಸಿದರು.
ನಂತರ ಮಾಜಿ ಶಾಸಕ ಆರ್.ನರೇಂದ್ರ ರವರು ಮಾತನಾಡಿ ಖಾಸಗಿ ಶಾಲೆಗಳಲ್ಲಿ ಲಕ್ಷಾಂತರ ಹಣ ಕೊಡಬೇಕಾಗುತ್ತೆ ನಮ್ಮ ಸರ್ಕಾರಿ ಶಾಲೆಯಲ್ಲಿ ಸರ್ಕಾರ ತಮ್ಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಮೂಲಭೂತ ಸೌಕರ್ಯವನ್ನು ಒದಗಿಸಿಕೊಟ್ಟಿದೆ ಶಾಲೆ ಅಭಿವೃದ್ಧಿ ಆಗಬೇಕಾದರೆ ಪೋಷಕರ ಪಾತ್ರ ಬಹಳ ಮುಖ್ಯವಾಗಿದ್ದು, ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದುಕೊಂಡು ಉನ್ನತ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಬಿ.ಇ.ಒ ಮಹೇಶ್, ಚಲನ ಚಿತ್ರ ನಿರ್ದೇಶಕ ಚೇತನ್, ಎಸ್.ಡಿ.ಎಂ.ಸಿ ಅಧ್ಯಕ್ಷೆ ಪುಟ್ಟಮದೇವಮ್ಮ ,ಚಾಮುಲ್ ನಿರ್ದೇಶಕ ಸಾಹುಲ್, ಗ್ರಾ.ಪಂ.ಮಾಜಿ ಅಧ್ಯಕ್ಷ ಯಶೋದಮ್ಮಾ, ಬಂಡಳ್ಳಿ ಮಾಜಿ ಗ್ರಾ.ಪಂ. ಸದಸ್ಯರಾದ ನಾಗರಾಜು, ತಮ್ಮಯ್ಯ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಮಂಜೇಶ್ ಗೌಡ, ವೆಂಕಟಾಚಲ, ಜೇರ್ ಸಿಮ್ ಪಾಷ, ಬಸರತ್, ಚಿನ್ನವೆಂಕಟ್, ವಿಜಯ್ ಕುಮಾರ್ ಸೇರಿದಂತೆ ಇನ್ನಿತರರು ಇದ್ದರು.



