Tuesday, April 22, 2025
Google search engine

Homeರಾಜ್ಯಸುದ್ದಿಜಾಲಜೀತ ಪದ್ಧತಿ ನಿರ್ಮೂಲನೆಗೆ ಶಿಕ್ಷಣ ಅತಿಮುಖ್ಯ : ನ್ಯಾ ಅನಿತಾ ಎನ್.ಪಿ

ಜೀತ ಪದ್ಧತಿ ನಿರ್ಮೂಲನೆಗೆ ಶಿಕ್ಷಣ ಅತಿಮುಖ್ಯ : ನ್ಯಾ ಅನಿತಾ ಎನ್.ಪಿ

ರಾಮನಗರ: ಸಾಲ ಕೊಡುವುದು ಅಥವಾ ಯಾರನ್ನಾದರೂ ಜೀತದಾಳಾಗಿ ದುಡುಮೆ ಮಾಡಲು ಇರಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದ ಇಂತಹ ಅಪರಾದಗಳಿಗೆ ಕಾನೂನಿನ ಕಾಯ್ದೆಯಡಿ ಮೂರು ವರ್ಷ ಕಾರಗೃಹವಾಸ ಮತ್ತು ದಂಡವನ್ನು ವಿಧಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ ಅವರು ತಿಳಿಸಿದರು.

ಅವರು ಫೆ. ೯ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀತದಾಳುಗಳು ತಾನು ಆರ್ಥಿಕ ಹಾಗೂ ಇತರೆ ಸಂಕಷ್ಟಗಳಲ್ಲಿ ಪಡೆದಂತಹ ಅಲ್ಪಪ್ರಮಾಣದ ಸಾಲ ಹಾಗೂ ಅದರ ಬಡ್ಡಿ ತೀರಿಸಲು ಜೀವನ ಪೂರ್ತಿ ದುಡಿಮೆ ಮಾಡಬೇಕಾಗುತ್ತದೆ. ಹಲವು ಪ್ರಕರಣಗಳಲ್ಲಿ ತನ್ನ ಕುಟುಂಬವನ್ನು ಸಹ ಜೀತಕ್ಕೆ ಮುಡಿಪಾಗಿಡಬೇಕಾಗಿರುತ್ತದೆ. ಆದ್ದರಿಂದ ಜೀತಪದ್ಧತಿಯನ್ನು ಹೋಗಲಾಡಿಸಲು ಮಕ್ಕಳಿಗೆ ಶಿಕ್ಷಣ ಮುಖ್ಯವಾಗಿರುತ್ತದೆ. ಜಿಲ್ಲೆಯಲ್ಲಿ ೪೩ ಜನ ಜೀತಪದ್ಧತಿಯಿಂದ ಬಿಡುಗಡೆಗೊಂಡು ಜೀತ ವಿಮುಕ್ತರಾಗಿದ್ದಾರೆ ಎಂದರು.

ಗ್ರಾಮ ಮಟ್ಟದಲ್ಲಿ ಕಾರ್ಯಪಡೆಗಳ ರಚನೆ: ಮಕ್ಕಳು ಮತ್ತು ಮಾನವ ಕಾಣೆಯಾದ ಪ್ರಕರಣಗಳನ್ನು ಪತ್ತೆಹಚ್ಚಲು ಗ್ರಾಮ ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದ್ದು ಈ ಸಮಿತಿಯು ಕಾರ್ಯ ಪ್ರವೃತಿಯಾದಲ್ಲಿ ಮಕ್ಕಳು ಮತ್ತು ಮಾನವನ ಕಳ್ಳ ಸಾಗಾಣೆ ಮಾಡುವುದನ್ನು ಹಾಗೂ ಜೀತಪದ್ದತಿಯನ್ನು ತಡೆಯಬಹುದು. ಈ ಸಮಿತಿಯೊಂದಿಗೆ ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಶಿಕ್ಷಕರು ಸಹ ಕೈಜೋಡಿಸಬೇಕು ಎಂದರು. ಜೀತಪದ್ದತಿಯಿಂದ ಮುಕ್ತಿ ಹೊಂದಿದರವರಿಗೆ ಆಪ್ತಸಮಾಲೋಚನೆ ಮೂಲಕ, ಕೌಶಲ್ಯ ತರಬೇತಿ, ವಿದ್ಯಾಭ್ಯಾಸ, ವಸತಿ, ಉದ್ಯೋಗ ಹಾಗೂ ಬ್ಯಾಂಕ್ ಗಳಲ್ಲಿ ಸಾಲ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಡರನ್ನಾಗಿಬಹುದು ಎಂದರು.

ಟಾಸ್ಕ್ ಪೋರ್ಸ್ ಸಮಿತಿ ರಚನೆ: ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ನ್ಯಾಯಾಧೀಶರು ಅಧ್ಯಕ್ಷರಾಗಿರುತ್ತಾರೆ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಜೀತಪದ್ಧತಿ ಕುರಿತು ಬರುವ ದೂರುಗಳನ್ನು ಪರಿಶೀಲಿಸಿ, ಜೀತಪದ್ಧತಿ ಕುರಿತು ಕ್ರಮಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಜೀತ ಪದ್ದತಿ ನಿರ್ಮೂಲನೆ ಕುರಿತು ಅರಿವು ಮೂಡಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಿಂದ ಜಿಲ್ಲಾ ಪಂಚಾಯತ್‌ವರೆಗೆ ಆಯೋಜಿಸಲಾಗಿದ್ದ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಚಾಲನೆ ನೀಡಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಚಿಕ್ಕ ಸುಬ್ಬಯ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular