ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಲಘು ಅಪಘಾತಕ್ಕೀಡಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಮಕೂರು ತಾಲೂಕಿನ ನಂದಿಹಳ್ಳಿ ಬಳಿ ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಚಲಿಸುತಿದ್ದ ರಾಜಸ್ಥಾನದ ಲಾರಿಗೆ ಸಚಿವರ ಕಾರು ಗುದ್ದಿದ್ದು, ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಸಚಿವರು ಹೋಗುತಿದ್ದರು. ಸಚಿವರು ಸೇರಿ ಮೂವರು ಕಾರಿನಲ್ಲಿ ಪ್ರಯಾಣಿಸುತಿದ್ದರು. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರು.
ಬದಲಿ ಕಾರು ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಕ್ಯಾತಸಂದ್ರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.