Friday, April 18, 2025
Google search engine

Homeಸ್ಥಳೀಯಈದ್ ಮಿಲಾದ್, ಗಣೇಶೋತ್ಸವ: ಹಿಂದೂ-ಮುಸ್ಲಿಮರಿಂದ ಭಾವೈಕ್ಯದ ಸಂದೇಶ

ಈದ್ ಮಿಲಾದ್, ಗಣೇಶೋತ್ಸವ: ಹಿಂದೂ-ಮುಸ್ಲಿಮರಿಂದ ಭಾವೈಕ್ಯದ ಸಂದೇಶ

ಮೈಸೂರು: ನಗರದ ಸುಣ್ಣದ ಕೆರೆಯಲ್ಲಿ ಶ್ರೀ ವಿನಾಯಕ ಯುವಕರ ಬಳಗ ವತಿಯಿಂದ ಗಣೇಶ ಪ್ರತಿಷ್ಠಾಪನೆ ಯಲ್ಲಿ ಮುಸಲ್ಮಾನ್ ಸಮುದಾಯದ ಮುಖಂಡರು ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಂಡರು

ಕಾಂಗ್ರೆಸ್ ಮುಖಂಡ ಜಿ ಶ್ರೀನಾಥ್ ಬಾಬು ಮಾತನಾಡಿ, ನಮ್ಮ ದೇಶದಲ್ಲಿ ವರ್ಷದಲ್ಲಿ ಹಲವಾರು ಹಬ್ಬಗಳನ್ನು ಆಚರಣೆ ಮಾಡುತ್ತಿದ್ದು, ಪ್ರತಿ ವರ್ಷವೂ ಸಹ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬ ಸಮೀಪ ಬಂದಿದ್ದರಿಂದ ಉಭಯ ಸಮಾಜದ ಬಾಂಧವರು ಈ ಹಬ್ಬಗಳನ್ನು ಬಹಳ ಶಾಂತಿಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳುವಂತೆ ಕರೆ ನೀಡಿದರು.

ಶ್ರೀ ವಿನಾಯಕರ ಯುವಕರ ಬಳಗದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಇತಿಹಾಸದಲ್ಲಿ ಎರಡು ಸಮುದಾಯಗಳ ಹಬ್ಬಗಳು ಬಂದರೆ ಸೌಹಾರ್ಧವಾಗಿ ಆಚರಣೆ ಮಾಡುವ ಪದ್ಧತಿ ನಮ್ಮ ನಾಡಿನಲ್ಲಿದೆ. ಆದರೆ ಕೆಲವು ಕಿಡಿಗೇಡಿಗಳಿಂದ ಎರಡು ಸಮಾಜದಲ್ಲಿ ಶಾಂತಿಯನ್ನು ಕದಡವ ಯತ್ನಗಳು ನಡೆಯುತ್ತಿದ್ದು, ಆದ್ದರಿಂದ ಎರಡು ಸಮುದಾಯದ ಮುಖಂಡರು ಈ ಬಗ್ಗೆ ಲಕ್ಷ್ಯ ವಹಿಸಿ ಹಬ್ಬಗಳನ್ನು ಆಚರಣೆ ಮಾಡಲು ಮುಂದಾಗಬೇಕು. ಈ ದಿನ ಈ ಯುವಕರು ಒಟ್ಟಾಗಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುತ್ತಾ ಬಂದಿರುವುದು ಬಹಳ ಸಂತಸದ ವಿಚಾರ. ಇದೇ ರೀತಿ ಸೌಹಾರ್ದತೆ ಆಚರಣೆ ಪ್ರತಿ ಜಿಲ್ಲೆಯಲ್ಲಿ ಆದರೆ ಬಹಳ ಉತ್ತಮ ಬೆಳವಣಿಗೆಯನ್ನು ರಾಜ್ಯದಲ್ಲಿ ಕಾಣಲು ಸಾಧ್ಯವಿದೆ ಎಂದರು.

ಕಾಂಗ್ರೆಸ್ ಚಾಮುಂಡೇಶ್ವರಿ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷ ಆರಿಫ್ ಪಾಷಾ ಮಾತನಾಡಿ ಹಿಂದೂ,ಮುಸಲ್ಮಾನ
ಸಮುದಾಯಗಳು ಸೇರಿದಂತೆ ಎಲ್ಲಾ ಜನಾಂಗದ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದು, ಈದ್ ಮಿಲಾದ್ ಹಾಗೂ ಮೊಹರಂನಲ್ಲಿ ಹಿಂದೂಗಳು ಪಾಲ್ಗೊಂಡು ಸೌಹಾರ್ದ ಸಾರುವ ಕೆಲಸಗಳು ಪ್ರತಿ ಜಿಲ್ಲೆಯಲ್ಲೂ ಆಗಬೇಕು ಇಂತಹ ಕಾರ್ಯಕ್ರಮಗಳಿಂದ ಸೌಹಾರ್ದಥ ಹೆಚ್ಚು ಗಟ್ಟಿಯಾಗುತ್ತದೆ ಎಂದು ಹೇಳಿದರು

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ ಶ್ರೀನಾಥ್ ಬಾಬು, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಶ್ರೀ ವಿನಾಯಕ ಗೆಳೆಯರ ಬಳಗದ ಅಧ್ಯಕ್ಷರಾದ ಮಂಜುನಾಥ್, ಕಿಶೋರ್ ಕುಮಾರ್, ಜಿ ರಾಘವೇಂದ್ರ, ಬ್ಯಾಂಕ್ ಸಿದ್ದರಾಜು, ಸಿದ್ದರಾಮಯ್ಯ ಬ್ರಿಗೇಡ್ ಅಧ್ಯಕ್ಷರಾದ ಹಿನಕಲ್ ಉದಯ್, ಕಿರಣ್, ಚಕ್ರಪಾಣಿ,ಮುಸಲ್ಮಾನ್ ಸಮುದಾಯದ ಮುಖಂಡರುಗಳಾದ ಕಾಂಗ್ರೆಸ್ ಚಾಮುಂಡೇಶ್ವರಿ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷ ಆರಿಫ್ ಪಾಷಾ, ಗುಲ್ಚನ್ ಪಾಷಾ, ಇರ್ಫಾನ್, ಸೈಯಾದ್, ಇಮ್ರಾನ್ ಪಾಷಾ, ಮಹಮ್ಮದ್, ಶಫಿ ಉಲ್ಲಾ ಖಾನ್, ಹಾಗೂ ಸ್ಥಳೀಯ ಮಕ್ಕಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular