ಮುಂಬೈ : ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಸಿಎಂ ಆಗಲಿದ್ದಾರೆ. ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅನುಮೋದಿಸಲಾಗಿದೆ. ಬುಧವಾರ ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರನ್ನು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಮಾಡಲು ಒಪ್ಪಿಗೆ ನೀಡಲಾಗಿದೆ. ಈ ನಿರ್ಧಾರದ ನಂತರ, ಈಗ ದೇವೇಂದ್ರ ಫಡ್ನವೀಸ್ ಅವರು ಬೆಂಬಲಿಗ ಶಾಸಕರ ಹೆಸರುಗಳೊಂದಿಗೆ ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಮಹಾಯುತಿ ನಾಯಕರು ರಾಜಭವನಕ್ಕೆ ತೆರಳಲಿದ್ದಾರೆ. ಡಿಸೆಂಬರ್ 5 ರಂದು ಮಹಾರಾಷ್ಟ್ರದ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಿಜೆಪಿಯ ಹಲವು ಹಿರಿಯ ನಾಯಕರು ಇದರಲ್ಲಿ ಭಾಗಿಯಾಗಲಿದ್ದಾರೆ.