ಯಳಂದೂರು : ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂ ಎಸ್ ಐ ಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ರವರ ಹಿರಿಯ ಪುತ್ರ ಪಿ. ಚಾಮರಾಜು ಸೋಮವಾರ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇವರು ಮೃತಪಟ್ಟಿದ್ದಾರೆ.
ಯಳಂದೂರು ತಾಲೂಕು ವ್ಯವಸಾಯ ಉತ್ಪನ್ನ ಮಾರಾಟಗಾರರ ಸಹಕಾರ ಸಂಘದ ನಿರ್ದೇಶಕರಾಗಿದ್ದರು. ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ಇವರು ತೊಡಗಿಕೊಂಡಿದ್ದರು.
ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರಿಗೆ ತಂದೆ ಶಾಸಕ ಸಿ. ಪುಟ್ಟರಂಗಶೆಟ್ಟಿ, ತಾಯಿ ವೆಂಕಟಮ್ಮ ಸಹೋದರ, ಸಹೋದರಿಯರು ಪತ್ನಿ ಹಾಗೂ ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ.
ಇವರ ಅಂತ್ಯಕ್ರಿಯೆಯು ಮಂಗಳವಾರ ಯಳಂದೂರು ತಾಲೂಕಿನ ಉಪ್ಪಿನಮೂಳೆ ಗ್ರಾಮದ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.