Sunday, April 20, 2025
Google search engine

Homeಅಪರಾಧಆಕ್ಷೇಪಾರ್ಹ ವೀಡಿಯೋ ತೆಗೆಯುವಂತೆ ಎಕ್ಸ್‌ಗೆ ಚುನಾವಣಾ ಆಯೋಗ ಸೂಚನೆ

ಆಕ್ಷೇಪಾರ್ಹ ವೀಡಿಯೋ ತೆಗೆಯುವಂತೆ ಎಕ್ಸ್‌ಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿಯ ಕರ್ನಾಟಕ ರಾಜ್ಯ ಘಟಕ ಹಂಚಿಕೊಂಡಿರುವ ಆಕ್ಷೇಪಾರ್ಹ ವಿಡಿಯೊವನ್ನು ತಕ್ಷಣ ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ಗೆ ಸೂಚಿಸಿದೆ. ಬಿಜೆಪಿ ಹಂಚಿಕೊಂಡಿರುವ ಈ ಅನಿಮೇಟೆಡ್ ವಿಡಿಯೊ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಫ್‌ಐಆರ್ ದಾಖಲಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಐಟಿ ನಿಯಮ ೨೦೨೧ರ ಪ್ರಕಾರ ಆಕ್ಷೇಪಾರ್ಹ ಪೋಸ್ಟ್ ಅನ್ನು ತೆಗೆದುಹಾಕಲು ಮೇ ೫ ರಂದು ‘ಎಕ್ಸ್’ ಗೆ ಪತ್ರವನ್ನೂ ಬರೆದಿದ್ದಾರೆ ಎಂದು ಆಯೋಗ ತಿಳಿಸಿದೆ. ಅದಾಗ್ಯೂ ಸಾಮಾಜಿಕ ಮಾಧ್ಯಮ ವೇದಿಕೆಯಿಂದ ಪೋಸ್ಟ್ ಅನ್ನು ತೆಗದುಹಾಕಿರಲಿಲ್ಲ. ಆ ಕಾರಣ ವಿಡಿಯೊವನ್ನು ತಕ್ಷಣ ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಲಾಗಿದೆ ಎಂದು ತಿಳಿಸಿದೆ. ಕರ್ನಾಟಕದ ಉಳಿದ ೧೪ ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಇದೇ ವೇಳೆ ವಿಡಿಯೊ ತೆಗೆದುಹಾಕುವಂತೆ ಎಕ್ಸ್‌ಗೆ ಆಯೋಗ ನಿರ್ದೇಶನ ನೀಡಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮೊಟ್ಟೆಗಳನ್ನು ಬಿಂಬಿಸಿ, ಆ ಮೊಟ್ಟೆಗಳಿರುವ ಬುಟ್ಟಿಗೆ ಮುಸ್ಲಿಂ ಮೊಟ್ಟೆಯನ್ನು ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಂದಿದ್ದಾರೆ. ಮರಿಯಾದ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮರಿಗಳಿಗೆ ಸೇರಬೇಕಾದ ಅನುದಾನವನ್ನು ಮುಸ್ಲಿಂ ಮರಿಗಳಿಗೆ ಮಾತ್ರ ಸೇರಿಸಲಾಗಿದೆ…’ ಎಂಬ ಹೇಳಿಕೆಯೊಂದರ ವಿಡಿಯೊ ತುಣುಕನ್ನು ಬಿಜೆಪಿಯ ಕರ್ನಾಟಕ ಘಟಕದ ಖಾತೆಯಲ್ಲಿ ಹಂಚಿಕೊಂಡಿದೆ.

ಈ ಸಂಬಂಧ ಕಾಂಗ್ರೆಸ್ ದೂರು ನೀಡಿದ್ದು, ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಘಟಕದ ಮುಖ್ತಸ್ಥ ಅಮಿತ್ ಮಾಳವೀಯ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

RELATED ARTICLES
- Advertisment -
Google search engine

Most Popular