Friday, April 11, 2025
Google search engine

HomeUncategorizedರಾಷ್ಟ್ರೀಯ12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಒಂಬತ್ತು ರಾಜ್ಯಗಳಲ್ಲಿ ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಭಾರತೀಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದ್ದು ಸೆಪ್ಟಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ.

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸರ್ಬಾನಂದ ಸೋನೋವಾಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಾಲಿ ಸದಸ್ಯರು ಲೋಕಸಭೆಗೆ ಆಯ್ಕೆಯಾದ ನಂತರ ತೆರವಾದ ಸ್ಥಾನಗಳಿಗೆ ಚುನಾವಣೆ ದಿನಾಂಕವನ್ನ ಘೋಷಿಸಲಾಗಿದೆ.

ಆಗಸ್ಟ್ 14 ರಂದು ರಾಜ್ಯಸಭೆ ಚುನಾವಣೆಗೆ ಅಧಿಸೂಚನೆ ಮತ್ತು ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದೆ. ಪ್ರತಿ ರಾಜ್ಯಸಭಾ ಸ್ಥಾನಕ್ಕೆ ಸೆಪ್ಟೆಂಬರ್ 3 ರಂದು ಪ್ರತ್ಯೇಕವಾಗಿ ಮತದಾನ ನಡೆಸಲಾಗುವುದು ಮತ್ತು ಅಂದೇ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

RELATED ARTICLES
- Advertisment -
Google search engine

Most Popular