ಗುಂಡ್ಲುಪೇಟೆ: ತಾಲೂಕಿನ ರಾಘವಾಪುರ ಗ್ರಾಮ ಪಂಚಾಯಿತಿಯ ನೂತನ ಕಾಂಗ್ರೆಸ್ ಬೆಂಬಲಿತ ಮಹಾದೇವಪ್ಪ ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಸುಧಾರಾಣಿ ಅವಿರೋಧ ಆಯ್ಕೆಯಾದರು.
ರಾಘವಾಪುರ ಗ್ರಾಪಂ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಹದೇವಪ್ಪ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷ ಸ್ಥಾನಕ್ಕೆ ಸುಧಾರಾಣಿ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆ ಚುನಾವಣೆ ಅಧಿಕಾರಿಯಾಗಿದ್ದ ಶಾಂತಮ್ಮ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು. ನಂತರ ನೂತನ ಅಧ್ಯಕ್ಷ ಹಾಗು ಉಪಾಧ್ಯಕ್ಷರಿಗೆ ಬೆಂಬಲಿಗರು ಹೂವಿನ ಹಾರ ಹಾಕಿ ಸನ್ಮಾಸಿದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಮಹಾದೇವಪ್ಪ ಹಾಗೂ ಉಪಾಧ್ಯಕ್ಷೆ ಸುಧಾರಾಣಿ ಮಾತನಾಡಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳ ಸಹಕಾರ ಪಡೆದು ಗ್ರಾಮ ಪಂಚಾಯಿತಿಗೆ ಸರ್ಕಾರದಿಂದ ಬರುವ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿ ಗ್ರಾಪಂ ಅಭಿವೃದ್ಧಿಗೆ ಶ್ರಮ ವಹಿಸಲಾಗವುದು ಎಂದು ತಿಳಿಸಿದರು.
ಗ್ರಾಪಂ ಸದಸ್ಯರಾದ ಆರ್.ಡಿ.ಉಲ್ಲಾಸ್, ಡಿ.ಗೋವಿಂದರಾಜು, ಸಾವಿತ್ರಮ್ಮ, ಚಿಕ್ಕತಾಯಮ್ಮ, ಗೋವಿಂದರಾಜು, ಪಲ್ಲವಿ, ತಿಬ್ಬಯ್ಯ, ರತ್ನಮ್ಮ, ಮೈಮುಲ್ ಮಾಜಿ ನಿರ್ದೇಶಕ ಎನ್.ಮಹದೇವಪ್ಪ, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಶ್ರೀನಿವಾಸಮೂರ್ತಿ, ಹಸಗೂಲಿ ಮಹದೇವಪ್ಪ, ಮಹೇಶ್, ಅಶೋಕ್, ಪಿಡಿಓ ನಾಗಲಾಂಬಿಕೆ, ಮಹದೇವಸ್ವಾಮಿ ಸೇರಿದಂತೆ ಗ್ರಾಪಂ ಸಿಬ್ಬಂದಿ ವರ್ಗದವರು ಹಾಜರಿದ್ದರು.