ಪಾಂಡವಪುರ : ವಿದ್ಯುತ್ ಪ್ರವಹಿಸಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಮೃತಿ ಗ್ರಾಮದಲ್ಲಿ ನಡೆದಿದೆ.
ಅಮೃತಿ ಗ್ರಾಮದ ಕುಮಾರ್(೪೦) ಮೃತ ರೈತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದ್ದಾನೆ. ತಕ್ಷಣ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಅಕ್ಕ ಪಕ್ಕದ ಜಮೀನಿನ ರೈತರು ಮೃತ ವ್ಯಕ್ತಿಯ ಚಿರಾಟ ಕೇಳಿ ತಕ್ಷಣ ಸಹಾಯಕ್ಕೆ ಧಾವಿಸಿದರಾದರು ಅ ವೇಳೆಗಾಗಲೇ ವ್ಯಕ್ತಿ ಮೃತ ಪಟ್ಟಿರುವುದು ಖಚಿತವಾಗಿದೆ.
ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಮೃತನಿಗೆ ಪತ್ನಿ ರೇಖಾ, ಇಬ್ಬರು ಮಕ್ಕಳಿದ್ದಾರೆ. ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.