Monday, April 21, 2025
Google search engine

Homeಅಪರಾಧವಿದ್ಯುತ್ ಸ್ಪರ್ಶ : ರೈತ ಸಾವು

ವಿದ್ಯುತ್ ಸ್ಪರ್ಶ : ರೈತ ಸಾವು

ಪಾಂಡವಪುರ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ರೈತನೊಬ್ಬ ಸಾವನ್ನಪ್ಪಿರುವ ಘಟನೆ ತಾಲೂಕಿನ ನುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹದೇವು(೫೨) ಮೃತ ರೈತ. ಗ್ರಾಮದ ಹೊರವಲಯದಲ್ಲಿರುವ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು ಗಮನಿಸದೆ ತುಳಿದ ಕಾರಣ ವಿದ್ಯುತ್ ಸ್ಪರ್ಶವಾಗಿ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇತ್ತ ಜಮೀನಿಗೆ ಹೋದ ತಂದೆ ಸಂಜೆಯಾದರು ಮನೆಗೆ ಬಾರದ ಹಿನ್ನೆಲೆಯಲ್ಲಿ ಪುತ್ರ ಜಮೀನಿಗೆ ಹೋಗಿ ನೋಡಿದಾಗ ತಂದೆ ಮಹದೇವು ಸಾವಪ್ಪಿನವರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಸಿದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನೀಡಿದ್ದಾರೆ.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಸೆಸ್ಕ್ ಇಲಾಖೆಯಿಂದ ಮೃತರ ಕುಟುಂಬಕ್ಕೆ ೫ ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಈ ವೇಳೆ ಸೆಸ್ಕ್ ಅಧಿಕಾರಿಗಳು ಸ್ಥಳದಲ್ಲಿಯೇ ೨ ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು. ಉಳಿಕೆ ಪರಿಹಾರದ ಹಣವನ್ನು ಸೆಸ್ಕ್ಇಲಾಖೆಯಿಂದ ಭರಿಸಲಾಗುವುದು ಎಂದು ಭರವಸೆ ನೀಡಿದರು.

ಬಳಿಕ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತರ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

RELATED ARTICLES
- Advertisment -
Google search engine

Most Popular