ಹೊಸೂರು: ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ಸುದ್ದಿ ವಾಹಿನಿ ಸಂಸ್ಥೆಯು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ಎಲಿಮೆಂಟ್ ಇಂಜಿನಿಯರ್ ಪ್ರಶಸ್ತಿ ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮದ ಸಿವಿಲ್ ಇಂಜಿನಿಯರ್ ಎಚ್.ಎನ್.ರಮೇಶ್ ಅವರಿಗೆ ಲಭ್ಯವಾಗಿದೆ
ಇವರು 2006 ರಿಂದ 2021 ಶಿಕ್ಷಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಇಲಾಖೆ ಮತ್ತು ಜಿಲ್ಲಾಪಂಚಾಯಿತ್ ನಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ನಂತರ ವೃತ್ತಿಗೆ ರಾಜಿನಾಮೆ ಸಲ್ಲಿಸಿ ನಂತರ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವುದನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಗುರುವಾರ ಬೆಂಗಳೂರಿನ ಲಲಿತಾ ಆಶೋಕ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇವರಿಗೆ ಈ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಚಿತ್ರನಟ ನೀನಾಶಂ ಸತೀಶ್, ಕನ್ನಡಪ್ರಭ ಪ್ರಧಾನ ಸುದ್ದಿ ಸಂಪಾದಕ ರವಿಹೆಗಡೆ, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ವಿದ್ಯಾಶಂಕರ್, ಹರದನಹಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷೆ ನಂದಿನಿ ರಮೇಶ್ ಇದ್ದರು.