ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಾದರಳ್ಳಿ ಗ್ರಾಮ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳಲ್ಲಿ ಒಂದು ಪುಟ್ಟ ಮರಿ ಆನೆ, ಸಲಗ ಸೇರಿ 9 ಆನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಅಜ್ಜಹಳ್ಳಿ, ಎಲಾದ ಹಳ್ಳಿ, ಗುಳ ಘಟ್ಟ, ಮುಟ್ಟನಹಳ್ಳಿ ಮತ್ತು ಮಾದರಹಳ್ಳಿ ಗ್ರಾಮಗಳಲ್ಲಿ ಕಟಾವಿಗೆ ಬಂದಿದ್ದ ಕಬ್ಬು ಹಾಗೂ ತೆಂಗಿನ ಮರಗಳನ್ನು ಆನೆಗಳು ತುಳಿದು ನಾಶ ಮಾಡಿದ್ದು ವಾರಗಳಿಂದ ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದು ಆನೆಗಳ ಹಿಂಡುನ್ನು ನೋಡಲು ವಿವಿಧ ಹಳ್ಳಿಗಳಿಂದ ಜನರು ಆಗಮಿಸುತ್ತಿರುವ ಹಿನ್ನೆಲೆ ಸದ್ಯ ಸ್ಥಳದಲ್ಲೇ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಪೊಲೀಸರು ಬೀಡು ಬಿಟ್ಟಿದ್ದಾರೆ. ಹೆಚ್ಚು ಜನ ಸೇರುತ್ತಿರುವ ಹಿನ್ನೆಲೆ ಕಾಡಿಗೆ ಆನೆಗಳನ್ನು ಓಡಿಸಲು ಕಷ್ಟವಾಗುತ್ತಿದೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಅಲ್ಲದೆ ತಕ್ಷಣವೇ ರೈತರ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಆನೆಗಳನ್ನು ಕಾಡಿಗೆ ಓಡಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ