Thursday, April 3, 2025
Google search engine

Homeಸಿನಿಮಾಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

ಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

“ಕಂಬ್ಳಿಹುಳ’ ಖ್ಯಾತಿಯ ಅಂಜನ್‌ ನಾಗೇಂದ್ರ ನಾಯಕ ನಟನಾಗಿ ನಟಿಸುತ್ತಿರುವ, ಹಯವದನ ಸಾರಥ್ಯದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಸಿನಿಮಾ “ಎಲ್ಲೋ ಜೋಗಪ್ಪ ನಿನ್ನರಮನೆ’ ಫೆ.21ರಂದು ತೆರೆಕಾಣುತ್ತಿದೆ.

ನಿರ್ದೇಶಕ ಹಯವದನ ಯಾರು ಸಲೀಸಾಗಿ ಚಿತ್ರೀಕರಣ ಮಾಡಲಾಗದ ಜಾಗದಲ್ಲಿ ಸಿನಿಮಾವನ್ನು ಚಿತ್ರೀಕರಿಸಬೇಕೆಂಬ ಕನಸು ಇಟ್ಟುಕೊಂಡಿದ್ದರಂತೆ. ಅದರಂತೆ ಮಹಾರಾಷ್ಟ್ರ, ಉತ್ತರಖಂಡ, ದೆಹಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಿಮಾಲಯದ ಕೊರೆಯುವ ಚಳಿಯಲ್ಲಿಯೂ “ಎಲ್ಲೋ ಜೋಗಪ್ಪ ನಿನ್ನರಮನೆ’ವನ್ನು ಶೂಟಿಂಗ್‌ ನಡೆಸಿದ್ದಾರೆ. ಸುಂದರ ಸ್ಥಳಗಳಲ್ಲಿ ಸಿನಿಮಾ ಶೂಟ್‌ ಮಾಡಿರುವ ಖುಷಿ ಚಿತ್ರತಂಡದಲ್ಲಿದೆ. ಈ ಚಿತ್ರ ಒಂದು ಜರ್ನಿಯ ಕಥೆ. ತಂದೆ-ಮಗನ ನಡುವಿನ ಭಾವನಾತ್ಮಕ ಸಂಬಂಧ ಈ ಸಿನಿಮಾ ಹೈಲೈಟ್ಸ್‌.

ತಂದೆಯ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಸಿನಿಮಾದಲ್ಲಿದೆ. ಲವ್‌, ಸೆಂಟಿಮೆಂಟ್‌, ಕಾಮಿಡಿ ಎಲ್ಲವನ್ನೂ ಒಳಗೊಂಡಿರುವ ಈ ಚಿತ್ರದಲ್ಲಿ ಅಂಜನ್‌ ನಾಗೇಂದ್ರಗೆ ಜೋಡಿಯಾಗಿ ಯುವ ನಟಿ ವೆನ್ಯ ರೈ ನಟಿಸಿದ್ದು, ಸಂಜನಾ ದಾಸ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿ ಕೊಂಡಿದ್ದಾರೆ.

ಉಳಿದಂತೆ ಶರತ್‌ ಲೋಹಿತಾಶ್ವ, ಸ್ವಾತಿ, ದಾನಪ್ಪ, ದಿನೇಶ್‌ ಮಂಗಳೂರು, ಬಿರಾ ದಾರ್‌ ತಾರಾಬಳಗದಲ್ಲಿದ್ದಾರೆ. ಪವನ್‌ ಸಿಮಿಕೇರಿ ಮತ್ತು ಸಿಂಧು ಹಯ ವದನ ಚಿತ್ರವನ್ನು ನಿರ್ಮಾಣ ಮಾಡು ತ್ತಿದ್ದಾರೆ. ಶಿವ ಪ್ರಸಾದ್‌ ಸಂಗೀತ, ನಟರಾಜ್‌ ಮದ್ದಾಲ ಛಾಯಾಗ್ರಹ ಣ, ರವಿಚಂದ್ರನ್‌ ಸಂಕಲನದಲ್ಲಿ ಸಿನಿಮಾ ಮೂಡಿಬಂದಿದೆ.

RELATED ARTICLES
- Advertisment -
Google search engine

Most Popular