Friday, April 4, 2025
Google search engine

Homeಸ್ಥಳೀಯನೇತಾಜಿ ವಿಚಾರ ಮೈಗೂಡಿಸಿಕೊಳ್ಳಿ: ಟಿ ಎಸ್ ಶ್ರೀವತ್ಸ

ನೇತಾಜಿ ವಿಚಾರ ಮೈಗೂಡಿಸಿಕೊಳ್ಳಿ: ಟಿ ಎಸ್ ಶ್ರೀವತ್ಸ

ಮೈಸೂರು: ನಗರದ ನ್ಯೂ ಸಯ್ಯಾಜಿರಾವ್ ರಸ್ತೆ ಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಕೆಎಂಪಿಕೆ ಟ್ರಸ್ಟ್ ಸಹಯೋಗದೊಂದಿಗೆ ಭಾರತೀಯ ಭೂಸೇನಾ ಸಂಸ್ಥಾಪಕ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 128ನೇ ಜನ್ಮದಿನದ ಅಂಗವಾಗಿ ಜೈ ಹಿಂದ್ ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಶಾಸಕ ಟಿ ಎಸ್ ಶ್ರೀವತ್ಸಲ್ಯ ಅವರು ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅವರ ಜನ್ಮದಿನ ಆಚರಿಸಿದರಷ್ಟೇ ಸಾಲದು; ಅವರ ಆದರ್ಶ ವಿಚಾರಗಳನ್ನು ಜೀವನದಲ್ಲಿ ಆದರ್ಶವಾಗಿ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ ಮಾತನಾಡಿ, ‘ಬೋಸ್‌ ಅವರ ವಿಚಾರಗಳು ಯುವಜನತೆಗೆ ಪ್ರೇರಣೆಯ ಕಥನಗಳಾಗಿವೆ. ಸ್ವತಂತ್ರ ಹೋರಾಟದಲ್ಲಿ ರಾಜೀರಹಿತ ಹೋರಾಟ ಮಾಡಿದ್ದರು. ತಮ್ಮ ಬಾಲ್ಯದಿಂದಲೂ ಇಡೀ ದೇಶದ ಜನರ ವಿಮುಕ್ತಿಗಾಗಿ, ಶೋಷಣೆಯಿಂದ ಹೋರಾಟ ಮಾಡಿದ್ದರು’ ಎಂದು ಸ್ಮರಿಸಿದರು.

ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ರಾಷ್ಟ್ರೀಯ ಮನೋಭಾವ ದೇಶಪ್ರೇಮದ ವೈಚಾರಿಕವಾಗಿ ಚಿಂತಿಸಬೇಕು. ನೇತಾಜಿ ಅವರು ಹೇಳಿದಂತೆಯೇ ಪ್ರತಿಯೊಂದು ವಿಭಾಗದಲ್ಲೂ ನಡೆಯುವ ಅನ್ಯಾಯವನ್ನು ಪ್ರಶ್ನಿಸುವ ಗುಣ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’ ಎಂದರು.

ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 40ಕ್ಕೂ ಹೆಚ್ಚು ದೇಶಭಕ್ತರು ಉತ್ಸಾಹಕವಾಗಿ ರಕ್ತದಾನ ಮಾಡಿದರು.

ಶಾಸಕರಾದ ಟಿ ಎಸ್ ಶ್ರೀವತ್ಸ, ಬಿಜೆಪಿ ನಗರಧ್ಯಕ್ಷ ಎಲ್ ನಾಗೇಂದ್ರ, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಬಿಜೆಪಿ ಚಾಮರಾಜ ಕ್ಷೇತ್ರದ ಅಧ್ಯಕ್ಷ ದಿನೇಶ್ ಗೌಡ, ವಕೀಲರಾದ ಜಯಶ್ರೀ ಶಿವರಾಂ, ಸವಿತಾ ಘಾಟ್ಕೆ, ದಿವ್ಯ, ರೂಪ, ಕೇಬಲ್ ವಿಜಿ, ಸೂರಜ್, ಬಾಲಾಜಿ, ಚಾಮರಾಜ ಕ್ಷೇತ್ರದ ಬಿಜೆಪಿ ಉಪಾಧ್ಯಕ್ಷ ರವಿಕುಮಾರ್, ಸಚಿನ್ ನಾಯಕ್, ಗೌರವ್, ಸುರೇಶ್, ಸುಚಿಂದ್ರ, ಮಿರ್ಲೆ ಪನೀಶ್ ಹಾಗೂ ಇನ್ನಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular