ಮಡಿಕೇರಿ : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಆನ್‍ಲೈನ್ ನೂತನವಾಗಿ ನೋಂದಣಿಗೊಂಡಿರುವ ಹೋಂ-ಸ್ಟೇಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಮಂಗಳವಾರ ಕುಶಾಲನಗರದ ಶಾಸಕರ ಕಚೇರಿಯಲ್ಲಿ ಪ್ರಮಾಣ ಪತ್ರ ವಿತರಿಸಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಣಿಗೊಳ್ಳುವುದರ ಮುಖಾಂತರ ಉತ್ತಮ ಆದಾಯ ಗಳಿಸಲು ಮತ್ತು ಸುಸ್ಥಿರ ಮತ್ತು ಜವಾಬ್ದಾರಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೋರಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇ, ಹೋಟೆಲ್ ಮತ್ತು ರೆಸಾರ್ಟ್‍ಗಳು ಕೂಡ ನಿಯಮಗಳನ್ನು ಪಾಲಿಸಿ ಪ್ರವಾಸೋದ್ಯಮ ಇಲಾಖೆಯ ಕೆ.ಟಿ.ಟಿ.ಎಫ್ ಆನ್‍ಲೈನ್ ನೋಂದಾಯಿಸಿಗೊಳ್ಳುವಂತೆ ಕರೆ ನೀಡಿದರು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಅನಿತಾ ಭಾಸ್ಕರ್ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಜತೀನ್ ಬೋಪಣ್ಣ ಇತರರು ಉಪಸ್ಥಿತರಿದ್ದರು.