ಮದ್ದೂರು: ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆ ವತಿಯಿಂದ ಪರಿಸರ ದಿನಾಚರಣೆ ಹಿನ್ನೆಲೆ ತಹಶೀಲ್ದಾರ್ ಸೋಮಶೇಖರ್ ಕಚೇರಿ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.
ಬಳಿಕ ಮಾತನಾಡಿದ ಅವರು ನಮ್ಮ ಸುತ್ತಲಿನ ಪರಿಸರವನ್ನ ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಜೊತೆಗೆ ಅತಿ ಹೆಚ್ಚು ಗಿಡಗಳನ್ನ ನೆಟ್ಟು ಮರಗಳಾಗಿ ಮಾಡಬೇಕು ಎಂದರು.
ಈ ವೇಳೆ ತಾಲೂಕು ವಲಯ ಅರಣ್ಯಾಧಿಕಾರಿ ಗವಿಯಪ್ಪ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಶೈಲೇಂದ್ರ ಕುಮಾರ್, ಆರ್ ಐ ಜಗದೀಶ್, ಮೋಹನ್, ಮಹೇಂದ್ರ ಸೇರಿದಂತೆ ಇತರರು ಹಾಜರಿದ್ದರು.