Friday, April 18, 2025
Google search engine

Homeಸ್ಥಳೀಯಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಅಡಿಯಲ್ಲಿ ಕೇಂದ್ರ ಸರ್ಕಾರ ಆಡಳಿತ: ಎಂ ಮೋನಿಕಾ

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಅಡಿಯಲ್ಲಿ ಕೇಂದ್ರ ಸರ್ಕಾರ ಆಡಳಿತ: ಎಂ ಮೋನಿಕಾ

ಮೈಸೂರು: ಮೈಸೂರು ಮಹಾನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಗ್ರಾಮಾಂತರ ಇಲವಾಲ ಮಹಾಶಕ್ತಿ ಕೇಂದ್ರದ ಬೆಳವಾಡಿ ಗ್ರಾಮದಲ್ಲಿ ಮನೆ ಮನೆ ಸಂಪರ್ಕ ಮಾಡಿ ಸದಸ್ಯತಾ ಅಭಿಯಾನ -2024 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮೋನಿಕಾ. ಎಂ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಮತ್ತು ಕಾಯಕ ಸಿದ್ದಾಂತದ ಅಡಿಯಲ್ಲಿ ಕೇಂದ್ರ ಸರ್ಕಾರ ಆಡಳಿತ ನಡೆಸುತ್ತಿದೆ. ಬಡವರು ಮತ್ತು ಮಧ್ಯಮ ವರ್ಗದವರು ಆರ್ಥಿಕವಾಗಿ ಸಬಲರಾಗಲು ಜನಧನ್, ಉಜ್ವಲ ಮತ್ತು ಪ್ರಧಾನಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ್, ಮುದ್ರಾ ಯೋಜನೆಗಳು ಸಹಕಾರಿಯಾಗಿವೆ’ ಎಂದು ಹೇಳಿದರು.

ದೇಶದಲ್ಲಿ ಯುವ ಸಮುದಾಯದ ಸಂಖ್ಯೆ ಹೆಚ್ಚಿದ್ದು, ಅವರ ಸಾಮ್ಯರ್ಥ್ಯ ದೇಶದ ಅಭಿವೃದ್ದಿಗೆ ಬಳಕೆಯಾಗಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಹಾಗೂ ಜಿಲ್ಲಾ ಸದಸ್ಯತ ಅಭಿಯಾನ ತಂಡದ ಮೋನಿಕಾ. ಎಂ, ಕ್ಷೇತ್ರ ಒಬಿಸಿ ಉಪಾಧ್ಯಕ್ಷರಾದ ಗೀತಾ, ಬೂತ್ ನ ಕಾರ್ಯದರ್ಶಿಯಾದ ಮಣಿಯಮ್ಮ, ಆಶಾ, ಸುಗುಣ ಮುಂತಾದವರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular