Tuesday, April 22, 2025
Google search engine

Homeರಾಜ್ಯ೬೦೦ ಇಂದಿರಾ ಕ್ಯಾಂಟೀನ್ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

೬೦೦ ಇಂದಿರಾ ಕ್ಯಾಂಟೀನ್ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ ೬೦೦ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್‌ನಲ್ಲಿ ಎಲ್ಲರಿಗೂ ೫ ರೂ.ಗೆ ಬೆಳಗಿನ ಉಪಾಹಾರ ಮತ್ತು ೧೦ ರೂ.ಗೆ ಊಟ ನೀಡಲಾಗುವುದು ಎಂದರು.

ನಾವು ಬೆಂಗಳೂರಿನಲ್ಲಿ ಒಟ್ಟು ೧೮೮ ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸುತ್ತಿದ್ದೇವೆ. ವಿಮಾನ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆ ಇತ್ತು. ಹೀಗಾಗಿ ಇಲ್ಲಿ ಎರಡು ಕ್ಯಾಂಟೀನ್ ಆರಂಭಿಸಲಾಗುತ್ತಿದೆ. ಬೆಂಗಳೂರಿನಲ್ಲಿ ೧೮೮ ಹೊಸ ಇಂದಿರಾ ಕ್ಯಾಂಟೀನ್ ಗಳ ಪೈಕಿ ಈಗಾಗಲೇ ೪೦ ಪೂರ್ಣಗೊಂಡಿದ್ದು, ಉಳಿದವು ಪ್ರಗತಿಯಲ್ಲಿವೆ ಎಂದು ಸಿಎಂ ತಿಳಿಸಿದರು.

RELATED ARTICLES
- Advertisment -
Google search engine

Most Popular