Friday, April 4, 2025
Google search engine

Homeರಾಜಕೀಯಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂ ಗಂಡಾಂತರದಿಂದ ಪಾರಾಗಲು ಸಾಧ್ಯವಿಲ್ಲ: ಬಿವೈ ವಿಜಯೇಂದ್ರ

ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂ ಗಂಡಾಂತರದಿಂದ ಪಾರಾಗಲು ಸಾಧ್ಯವಿಲ್ಲ: ಬಿವೈ ವಿಜಯೇಂದ್ರ

ಹಾವೇರಿ: ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಗಂಡಾಂತರದಿಂದ ಪಾರಾಗಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಲೋಕಾಯುಕ್ತ ಅಧಿಕಾರಿಗಳು ಮುಡಾ ತನಿಖೆಯನ್ನು ಒತ್ತಡದಲ್ಲಿ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಆರೋಪಿ ನಂಬರ್ 1. ಚುನಾವಣೆ ಸಂದರ್ಭದಲ್ಲಿ ಸಿಎಂ ಗೆ ನೋಟಿಸ್ ಕೊಟ್ಟಿದ್ದಾರೆ. ತತ್ ಕ್ಷಣ ಸಿಎಂ ವಿಚಾರಣೆಗೆ ಹೋಗಿ ಬಂದಿದ್ದಾರೆ. ಲೋಕಾಯುಕ್ತದವರಿಗೆ ಸಿಎಂ ಭಯ ಕಾಡುತ್ತಿದೆ. ಎಷ್ಟು ಬೇಗ ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ಕೊಡಬೇಕು, ಬಿ ರಿಪೋರ್ಟ್ ಹಾಕಬೇಕು ಎಂದು ಲೋಕಾಯುಕ್ತ ತನಿಖೆ ಸಾಗುತ್ತಿದೆ ಎಂದು ಟೀಕಿಸಿದರು.

ಸಿಎಂ ಇಳಿಸಲು ಆಡಳಿತ ಪಕ್ಷದಲ್ಲೇ ಮುಹೂರ್ತ ಫಿಕ್ಸ್

ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಆಡಳಿತ ಪಕ್ಷದಲ್ಲೇ ಮುಹೂರ್ತ ಫಿಕ್ಸ್ ಆಗಿದೆ. ನಾನು ಹುಡುಗಾಟಿಕೆಗೆ ಈ ಮಾತಾಡುತ್ತಿಲ್ಲ. ಅವತ್ತೂ ಸವಾಲು ಹಾಕಿದ್ದೆ ಇವತ್ತೂ ಸವಾಲು ಹಾಕುತ್ತೇನೆ. ಸಿಎಂ ಐದು ವರ್ಷ ಅವಧಿ ಪೂರ್ಣ ಮಾಡುತ್ತೇನೆ ಎಂದು ಹೇಳಲಿ. ಅದು ಅಸಾಧ್ಯ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕಾಂಗ್ರೆಸ್ ಹೈಕಮಾಂಡ್ ಮುಹೂರ್ತ ಫಿಕ್ಸ್ ಮಾಡಿದೆ’ ಎಂದು ನುಡಿದರು.

RELATED ARTICLES
- Advertisment -
Google search engine

Most Popular