Saturday, November 22, 2025
Google search engine

Homeರಾಜ್ಯಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ...

ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಸಿಎಂ ಸ್ಪಷ್ಟ ಸೂಚನೆ

ಬೆಂಗಳೂರು: ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು‌ IG ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. SP-IG ಗಳು ಪ್ರತಿ ಠಾಣೆಗಳಿಗೆ ಹೋಗಿ ಪರಿಶೀಲನೆ ನಡೆಸಿದರೆ ಇವನ್ನೆಲ್ಲಾ ತಪ್ಪಿಸಬಹುದು ಎಂದು ಎಚ್ಚರಿಸಿದರು.

ನಾಳೆಯಿಂದಲೇ SP, IG ಗಳು ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ನೀಡಿ ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು. ಕೂಲಂಕುಶ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಸಿದರು.

ಫೇಕ್ ನ್ಯೂಸ್ ಪ್ರಸಾರ ತಡೆಗಟ್ಟಿ: ಇಲ್ಲಾಂದ್ರೆ ಕ್ರಮ ಎದುರಿಸಿ

ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್ ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ ಎಂದು ಎಚ್ಚರಿಸಿದರು.

ಕೃತಕ ಬುದ್ದಿಮತ್ತೆ ಬಳಸಿ. ಸ್ವಯಂ ಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದಾಖಲಿಸಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಡ್ರಗ್ಸ್ ಪೂರ್ತಿ ನಿಂತಿಲ್ಲ ಏಕೆ?

ಡ್ರಗ್ಸ್ ಮಾರೋರು ಯಾರು? ರೌಡಿಗಳು ಯಾರು?/ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರತ್ತೆ. ಆದರೂ ಯಾಕೆ ನಿಲ್ಲುತ್ತಿಲ್ಲ‌ ಎಂದು ಪ್ರಶ್ನಿಸಿದರು.

ನಿಮಗೆ ಗನ್ ಗಳನ್ನು ಕೊಟ್ಟಿರುವುದು ಏಕೆ ? ಈ ಬಗ್ಗೆ ರೌಡಿಗಳಿಗೆ ಏಕೆ ಭಯವಿಲ್ಲ. ರೌಡಿಗಳಿಗೆ ಪೊಲೀಸ್ ಭಯ ಇರಬೇಕು ಎಂದು ಎಚ್ಚರಿಸಿದರು.

ಕೆಲವು ಪೊಲೀಸರಿಗೆ ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲ ಎಂದರೆ ನಾಚಿಕೆಗೇಡು. ಇದನ್ನು ಸರಿಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಗೃಹ ಸಚಿವರಿಗೆ,  ಕರ್ನಾಟಕ‌ ಪೊಲೀಸ್ ಗೆ ಅಭಿನಂಧಿಸಿದ ಸಿಎಂ

ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದಕ್ಕೆ ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್ ಗೆ ಮುಖ್ಯಮಂತ್ರಿಗಳು ಅಭಿನಂಧಿಸಿದರು.‌

RELATED ARTICLES
- Advertisment -
Google search engine

Most Popular