Wednesday, April 9, 2025
Google search engine

Homeರಾಜ್ಯಸುದ್ದಿಜಾಲಪ್ರತಿಯೊಬ್ಬರೂ ರಕ್ತದಾನ ಮಾಡಿ ಮತ್ತೊಬ್ಬರ ಪ್ರಾಣ ಉಳಿಸಿ-ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಕರೆ

ಪ್ರತಿಯೊಬ್ಬರೂ ರಕ್ತದಾನ ಮಾಡಿ ಮತ್ತೊಬ್ಬರ ಪ್ರಾಣ ಉಳಿಸಿ-ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಕರೆ

ರಕ್ತದಾನ ಶಿಬಿರದ ಪೋಸ್ಟರ್ ಬಿಡುಗಡೆ

ಮದ್ದೂರು: ಪಟ್ಟಣದ ಮಹಿಳಾ ಕಾಲೇಜು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಭೇಟಿ ನೀಡಿ ಶಿಕ್ಷಕರು ಹಾಗೂ ಉಪನ್ಯಾಸಕರಿಂದ ಹಲವು ಸಮಸ್ಯೆಗಳನ್ನ ಆಲಿಸಿದರು. ಈ ವೇಳೆ ಮಾತನಾಡಿದವರು ಎಲ್ಲರೂ ನನ್ನನ್ನು ಆಶೀರ್ವದಿಸಿ ಹಾರೈಸಿ ಗೆಲ್ಲಿಸಿದ್ದೀರಿ.

ನಿಮ್ಮೆಲ್ಲರ ಪ್ರೀತಿ ಹಾರೈಕೆ ಸದಾ ನನ್ನ ಮ್ಯಾಲಿರಲಿ ಆರು ವರ್ಷದ ಕಾಲಾವಧಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿ ತೋರಿಸುತ್ತೇನೆ ನನ್ನ ಮೇಲೆ ವಿಶ್ವಾಸವನ್ನು ಇಡಿ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ನನ್ನ ಅವಧಿ ಮುಗಿಯುವುದರ ಮುಂಚೆ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಮತ್ತಷ್ಟು ಕೆಲಸ ಕಾರ್ಯಗಳನ್ನು ಮಾಡಲು ನನಗೆ ಅನುಕೂಲವಾಗುತ್ತದೆ ಎಲ್ಲರೂ ಒಗ್ಗಟ್ಟಿನಿಂದ ನನಗೆ ಸಹಕಾರ ನೀಡಿ ಎಂದರು.

ಬಳಿಕ ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಆಗಸ್ಟ್ 15ರಂದು ವಿವಿಧ ಸಂಘ-ಸಂಸ್ಥೆಗಳು ಹಮ್ಮಿಕೊಂಡಿರುವ ಕಾರ್ಗಿಲ್ ಯೋಧರ ನೆನಪಿಗಾಗಿ ಬೃಹತ್ ರಕ್ತದಾನ ಶಿಬಿರದ ಪೋಸ್ಟರ್ ಬಿಡುಗಡೆಗೊಳಿಸಿ ಪ್ರತಿಯೊಬ್ಬರೂ ರಕ್ತದಾನ ಮಾಡಿ ಮತ್ತೊಬ್ಬರ ಪ್ರಾಣ ಉಳಿಸಿ ಎಂದು ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಕರೆ ನೀಡಿದರು.

ಈ ವೇಳೆ ಮಹಿಳಾ ಸರ್ಕಾರಿ ಕಾಲೇಜು ಪ್ರಾಂಶುಪಾಲ ನಾರಾಯಣ್, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಸೇರಿದಂತೆ ಉಪನ್ಯಾಸಕರು ಹಾಜರಿದ್ದರು.

RELATED ARTICLES
- Advertisment -
Google search engine

Most Popular