ವರದಿ: ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ ವಹಿಸದೆ ಕಾಳಜಿ ಮಾಡಬೇಕು ಎಂದು ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ ಅಧ್ಯಕ್ಷ ಎಂ.ಎಂ ರಾಜೇಗೌಡ ತಿಳಿಸಿದರು.
ತಾಲೂಕಿನ ಆವರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ರೋಟರಿ ಪಿರಿಯಾಪಟ್ಟಣ ಮಿಡ್ ಟೌನ್, ಕ್ಯೂರ್ ಪ್ಲಸ್ ಆಸ್ಪತ್ರೆಗಳಾದ ಕಾವೇರಿ ಆಸ್ಪತ್ರೆ ಕುಶಾಲನಗರ ಮತ್ತು ಕ್ರಷ್ಣ ಆಸ್ಪತ್ರೆ ಬೆಟ್ಟದಪುರ ಸಹಭಾಗಿತ್ವದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ರೋಟರಿ ಸಂಸ್ಥೆ ಸಮಾಜದ ಹಲವು ಭಾಗಗಳಲ್ಲಿ ತನ್ನದೇ ಆದ ಸಾರ್ವಜನಿಕ ಸೇವೆ ಮೂಲಕ ಗುರುತಿಸಿಕೊಂಡು ತನ್ನ ಕೈಲಾದ ಸೇವೆ ಮಾಡುತ್ತಿದೆ, ರೋಟರಿ ಜಿಲ್ಲಾ ಕಾರ್ಯಕ್ರಮಗಳನ್ನು ತಾಲೂಕಿನ ವಿವಿದೆಡೆ ಹಮ್ಮಿಕೊಂಡು ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡಲಾಗುತ್ತದೆ ಈ ನಿಟ್ಟಿನಲ್ಲಿ ಆವರ್ತಿ ಗ್ರಾಮದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ವೇಳೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡು ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಈ ಸಂದರ್ಭ ರೋಟರಿ ಕಾರ್ಯದರ್ಶಿ ಐಕೆಪಿ ಹೆಗ್ಡೆ, ಸದಸ್ಯರಾದ ಅಂಬಲಾರೆ ಬಸವೇಗೌಡ, ಹರೀಶ್ ಗೌಡ, ಹೇಮೇಶ್ ಗೌಡ, ಆರ್.ಮಹದೆವಪ್ಪ, ಕಾವೇರಿ ಹಾಗು ಕ್ರಷ್ಣ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಇದ್ದರು.
ಆರ್.ಮಹದೆವಪ್ಪ, ಕಾವೇರಿ ಹಾಗು ಕ್ರಷ್ಣ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಇದ್ದರು.