ರಾಂಚಿ: ಭೂ ಹಗರಣ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಿಎಂ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಅವರು ಗಂಡೇ ಕ್ಷೇತ್ರದಿಂದ ಜಾರ್ಖಂಡ್ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸ್ಪೀಕರ್ ರವೀಂದ್ರ ನಾಥ್ ಮಹತೋ ಕಲ್ಪನಾ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂಪೈ ಸೊರೆನ್ ಮತ್ತು ಇತರ ಜೆಎಂಎಂ ನಾಯಕರು ಉಪಸ್ಥಿತರಿದ್ದರು.ಗಂಡೇ ಉಪಚುನಾವಣೆಯಲ್ಲಿ ಕಲ್ಪನಾ ಸೊರೆನ್ ಅವರು ಬಿಜೆಪಿಯ ದಿಲೀಪ್ ಕುಮಾರ್ ವರ್ಮಾ ಅವರನ್ನು ೨೭,೧೪೯ ಮತಗಳ ಅಂತರದಿಂದ ಸೋಲಿಸಿದರು. ಜೆಎಂಎಂ ಶಾಸಕ ಸರ್ಫರಾಜ್ ಅಹ್ಮದ್ ರಾಜೀನಾಮೆ ನೀಡಿದ ನಂತರ ಈ ಸ್ಥಾನ ತೆರವಾಗಿತ್ತು. ಮೇ ೨೦ ರಂದು ಮತದಾನ ನಡೆದಿದ್ದು, ೩.೧೬ ಲಕ್ಷ ಅರ್ಹ ಮತದಾರರಲ್ಲಿ ೨.೧೭ ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.