ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ನಡುವೆ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಇನ್ನೂ ಜೈಲಿನಲ್ಲಿರುವುದರಿಂದ, ಅವರ ಆಪ್ತ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ರಾಷ್ಟ್ರ ರಾಜಧಾನಿ ಮತ್ತು ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಚಾರದ ಉಸ್ತುವಾರಿ ವಹಿಸಿಕೊಂಡಿದ್ದಾರೆ.
ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನಿಂದ ಜಾಮೀನು ಪಡೆದಿರುವ ಸಿಸೋಡಿಯಾ ಅವರು ಇಂದು ಪಕ್ಷದ ಹಿರಿಯ ಸದಸ್ಯರ ಸಭೆ ನಡೆಸಲಿದ್ದಾರೆ.