Sunday, April 20, 2025
Google search engine

Homeರಾಜ್ಯಸುದ್ದಿಜಾಲನಾಳೆ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ನಾಳೆ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಮಡಿಕೇರಿ: ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ ಜ. ೫ ರಿಂದ ೧೨ ರವರೆಗೆ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ಜ. ೫ ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರಾದ ಡಾ. ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷ ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಬೆಂಗಳೂರು ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕರು ಹಾಗೂ ಜವಳಿ ಅಭಿವೃದ್ಧಿ ಆಯುಕ್ತ ಸಿ.ಎನ್.ಶ್ರೀಧರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ದಕ್ಷಿಣ ವಿಭಾಗ/ ಬೆಂಗಳೂರು ವಲಯ ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕ ರವಿಕುಮಾರ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಇತರರು ಪಾಲ್ಗೊಳ್ಳಲಿದ್ದಾರೆ.

RELATED ARTICLES
- Advertisment -
Google search engine

Most Popular