ನವದೆಹಲಿ : ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ತಿದ್ದುಪಡಿ ಮಾಡುವ ಮತ್ತು ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಹೇಳಿಕೆ ಈಗ ವಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಧೈರ್ಯವಿದ್ರೆ ಅನಂತ್ ಕುಮಾರ್ ಹೆಗಡೆಯನ್ನು ಪಕ್ಷದಿಂದ ಉಚ್ಛಾಟಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸವಾಲೆಸೆದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಧಾನಿ ಮೋದಿಗೆ ತಾಕತ್ತಿದ್ದರೆ ಬಾಯಿಗೆ ಬಂದಂತೆ ಮಾತನಾಡಿರುವ ಸಂಸದ ಅನಂತ್ ಕುಮಾರ್ ಹೆಗಡೆಯನ್ನು ನೀವು ಪಕ್ಷದಿಂದ ಉಚ್ಛಾಟಿಸಿ ಎಂದು ಹೇಳಿರುವ ಖರ್ಗೆ, ಬಿಜೆಪಿ ಸರ್ಕಾರವು ಸಂವಿಧಾನದಲ್ಲಿ ಏನೇ ಬದಲಾವಣೆ ಮಾಡಲು ಮುಂದಾದರೂ ಕೂಡಾ ದೇಶದಲ್ಲಿ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.