Saturday, April 19, 2025
Google search engine

HomeUncategorizedರಾಷ್ಟ್ರೀಯಕೇರಳದ ನಿಟ್ಟಾ ಜಿಲಟಿನ್ ಇಂಡಿಯಾ ಲಿಮಿಟೆಡ್ ಕಾರ್ಖಾನೆಯಲ್ಲಿ ಸ್ಫೋಟ: ಓರ್ವ ಸಾವು, ನಾಲ್ವರಿಗೆ ಗಾಯ

ಕೇರಳದ ನಿಟ್ಟಾ ಜಿಲಟಿನ್ ಇಂಡಿಯಾ ಲಿಮಿಟೆಡ್ ಕಾರ್ಖಾನೆಯಲ್ಲಿ ಸ್ಫೋಟ: ಓರ್ವ ಸಾವು, ನಾಲ್ವರಿಗೆ ಗಾಯ

ಎರ್ನಾಕುಲಂ (ಕೇರಳ): ನಿಟ್ಟಾ ಜಿಲಟಿನ್ ಇಂಡಿಯಾ ಲಿಮಿಟೆಡ್ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಮೃತನನ್ನು ರಾಜನ್ ಒರಂಗ್ (30) ಎಂದು ಗುರುತಿಸಲಾಗಿದೆ. ಇವರು ಪಂಜಾಬ್ ರಾಜ್ಯದ ನಿವಾಸಿಯಾಗಿದ್ದಾರೆ.

ಎರ್ನಾಕುಲಂನ ಕಕ್ಕನಾಡ್‌ ನಲ್ಲಿರುವ ಕಾರ್ಖಾನೆಯಲ್ಲಿ ಕಳೆದ ರಾತ್ರಿ (ಮಂಗಳವಾರ) 8 ಗಂಟೆಯ ಸುಮಾರಿಗೆ ಘಟನೆ ನಡೆಯಿತು. ರಾಸಾಯನಿಕ ಪದಾರ್ಥಗಳನ್ನು ದಾಸ್ತಾನಿಟ್ಟಿದ್ದ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

ಸ್ಥಳೀಯ ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಯೂ ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಸದ್ಯಕ್ಕೆ ಸ್ಫೋಟಕ್ಕೇನು ಕಾರಣ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

RELATED ARTICLES
- Advertisment -
Google search engine

Most Popular