ತುಮಕೂರು: ತುಮಕೂರಿನಲ್ಲಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅನುಮತಿಯಿಲ್ಲದೆ ಸ್ಫೋಟಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಅವರನ್ನು ಮಧುಗಿರಿ ಜೆಎಂಎಫ್‌ಸಿ ನ್ಯಾಯಾಲಯವು ಡಿಸೆಂಬರ್ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರು ತನಿಖೆ ಮುಂದುವರಿಸುತ್ತಿದ್ದಾರೆ.