Sunday, April 20, 2025
Google search engine

HomeUncategorizedರಾಷ್ಟ್ರೀಯಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ಅಲಹಾಬಾದ್​ ವಿಶ್ವವಿದ್ಯಾಲಯದ ವಿದ್ಯಾರ್ಥಿಗೆ ಗಾಯ

ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ಅಲಹಾಬಾದ್​ ವಿಶ್ವವಿದ್ಯಾಲಯದ ವಿದ್ಯಾರ್ಥಿಗೆ ಗಾಯ

ಅಲಹಾಬಾದ್: ಅಲಹಾಬಾದ್​ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ ಕೊಠಡಿಯಲ್ಲಿ ತಾನೇ ತಯಾರಿಸುತ್ತಿದ್ದ ಬಾಂಬ್ ಸ್ಫೋಟಗೊಂಡಿದ್ದು, ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ವಿದ್ಯಾರ್ಥಿ ಏಕೆ ಬಾಂಬ್ ತಯಾರಿಸುತ್ತಿದ್ದ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಅಲಹಾಬಾದ್ ವಿಶ್ವವಿದ್ಯಾನಿಲಯದ ಎಂಎ ವಿದ್ಯಾರ್ಥಿಯಾಗಿರುವ ಪ್ರಭಾತ್ ಯಾದವ್ ಪಿಸಿ ಬ್ಯಾನರ್ಜಿ ಹಾಸ್ಟೆಲ್‌ ನಲ್ಲಿರುವ ತಮ್ಮ ಕೋಣೆಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಅದು ಸ್ಫೋಟಗೊಂಡು ಅವರ ಬಲಗೈಗೆ ತೀವ್ರವಾಗಿ ಗಾಯವಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಶಿವಕುಟಿ) ರಾಜೇಶ್ ಕುಮಾರ್ ಯಾದವ್ ಹೇಳಿದ್ದಾರೆ.

ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಎಸ್‌ ಆರ್‌ ಎನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಭಾತ್ ಯಾದವ್ ವಿರುದ್ಧ ಶೀಘ್ರದಲ್ಲೇ ಪ್ರಕರಣ ದಾಖಲಿಸಲಾಗುವುದು ಎಂದು ಎಸಿಪಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular