ರಾಮನಗರ :ರಾಮನಗರ ಜಿಲ್ಲೆಯ ಜವಾಹರ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6ನೇ ತರಗತಿಯ ಪ್ರವೇಶ ಪರೀಕ್ಷೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸ್ತುತ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ್ದ ಕೊನೆಯ ದಿನಾಂಕವನ್ನು ಆ. 17ರ ವರೆಗೆ ವಿಸ್ತರಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಜಾಲತಾಣ (website) https://cbseitems.nic.in ಅಥವಾ https://navodaya.gov.in/nvs/en/Home1 ಮೂಲಕ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9972830864/ 7353665418/ 8310895504 ಅನ್ನು ಸಂಪರ್ಕಿಸುವoತೆ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.