ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ ದಸರಾ ರಜೆ ಅವಧಿ ವಿಸ್ತರಿಸಿ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಈ ಕೆಳಕಂಡತೆ ಉಲ್ಲೇಖ ಮಾಡಲಾಗಿದೆ. ಸುತ್ತೋಲೆ ದಿನಾಂಕ:08.10.2025 ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರೀಕರ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ, ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ ದಸರಾ ರಜೆ ಅವಧಿಯನ್ನು ವಿಸ್ತರಿಸುವ ಕುರಿತು. ಉಲ್ಲೇಖ: ಆಯಕ್ತರು, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು-01 ರವರ ಜ್ಞಾಪನ ಸಂಖ್ಯೆ: ಸಿ4(9).ವಾಕ್ರಿಯೋ/ಅನುಷ್ಠಾನ/01/2024-25, DO: 07.10.2025 ಉಲ್ಲೇಖದಂತೆ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಶಾಲಾ ಶಿಕ್ಷಣ ಇಲಾಖೆಯ ಜ್ಞಾಪನ ಪತ್ರದಲ್ಲಿ ಈ ಕೆಳಕಂಡಂತೆ ಸೂಚಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರೀಕರ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ದಿ : 18.10.2025 ರವರೆಗೆ ವಿಸ್ತರಿಸಲಾಗಿದೆ.
ಶಿಕ್ಷಕರು ಸಮೀಕ್ಷೆ ಕಾರ್ಯವನ್ನು ದಿ : 19.1C.2025 ರೊಳಗೆ ಪೂರ್ಣಗೊಳಿಸಬೇಕು. ಈ ಅವಧಿಯಲ್ಲಿ ಮಕ್ಕಳ ಕಲಿಕೆಗೆ ಉಂಟಾಗುವ ಕೊರತೆಯ ಅವಧಿಯನ್ನು ರಜಾ ದಿನಗಳ ನಂತರ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸುವುದು.
ಪ್ರಸ್ತುತ ದಿ : 12.10.2025 ರಿಂದ ನಡೆಯಲಿರುವ ದ್ವೀತಿಯ ಪಿಯುಸಿ ಮಧ್ಯಾವಧಿ ಪರೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡ ಉಪಪಾಸಕರನ್ನು ಸಮೀಕ್ಷಾ ಕಾರ್ಯದಿಂದ ಬಿಡುಗಡೆಗೊಳಿಸುವುದು ಎಂದು ಜ್ಞಾಪನದಲ್ಲಿ ಸೂಚಿಸಿರುತ್ತಾರೆ.ಮೇಲ್ಕಂಡ ಅಂಶಗಳ ಹಿನ್ನಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳು ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವುದರಿಂದ ಹಾಗೂ ಉಲ್ಲೇಖಿತ ಜ್ಞಾಪನ ಪತ್ರದನುಸಾರ ಸಂಘದ ವಸತಿ ಶಾಲೆಗಳಿಗೂ ಸಹ ಮೇಲ್ಕಂಡ ಸೂಚನೆಗಳಿಗೊಳಪಟ್ಟು ದಸರಾ ರಜೆ ಅವಧಿಯನ್ನು ದಿ : 18.10.2025 ರವರೆಗೆ ವಿಸ್ತರಿಸಲಾಗಿದೆ. (ಜ್ಞಾಪನ ಪತ್ರದ ಪ್ರತಿಯನ್ನು ಇದರೊಂದಿಗೆ ಅನುಬಂಧಿಸಿದೆ).ಮುಂದುವರೆದು ಕಾಲಕಾಲಕ್ಕೆ ಸರ್ಕಾರದಿಂ ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.
