Tuesday, August 26, 2025
Google search engine

Homeರಾಜ್ಯಸುದ್ದಿಜಾಲಮರು ವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಣಿ ಅವಧಿ ವಿಸ್ತರಣೆ

ಮರು ವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಣಿ ಅವಧಿ ವಿಸ್ತರಣೆ


ಬಳ್ಳಾರಿ: ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬೆಳೆಗಳ ವಿಮೆ ನೋಂದಾಣಿಯನ್ನು ಆಗಸ್ಟ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ ಸಪ್ಪಂಡಿ ಅವರು ತಿಳಿಸಿದ್ದಾರೆ.

ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘÀಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಗ್ರಾಮಪಂಚಾಯಿತಿ)ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ನೆರವಾಗುವುದು ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆವಿಮೆ ಯೋಜನೆ ಮುಖ್ಯ ಉದ್ದೇಶವಾಗಿದೆ.

ವಿಮಾ ಯೋಜನೆಯಡಿ ಹಸಿ ಮೆಣಸಿನಕಾಯಿ ಮತ್ತು ದಾಳಿಂಬೆ ಬೆಳೆಗಳು ವಿಮೆಗೆ ಒಳಪಡುವ ಬೆಳೆಗಳಾಗಿದ್ದು, ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿವೆ. ಹಸಿ ಮೆಣಸಿನಕಾಯಿ ಬೆಳೆ ವಿಮೆಗೆ ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ ರೂ.71 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.3550 ಆಗಿರುತ್ತದೆ. ದಾಳಿಂಬೆ ಬೆಳೆ ವಿಮೆಗೆ ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ 1 ಲಕ್ಷ 27 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.6,350 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು, ಕಂಪ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ: 08392-278177 ಹಾಗೂ ಮೊ. 9448511649, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ:08395-260389 ಹಾಗೂ ಮೊ. 9740934208, ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ:08396-222066 ಹಾಗೂ ಮೊ. 9448910277 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular