ಮೈಸೂರು: ರಾಜಕುಮಾರ್ ಕಲಾ ಸೇವಾ ಟ್ರಸ್ಟ್‌ನಿಂದ ಪುನೀತ್ ರಾಜಕುಮಾರ್ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ನಗರದ ಪುರಭವನದಲ್ಲಿ ನಾಳೆ ಅ.೨೯ರಂದು ಬೆಳಗ್ಗೆ ೭.೩೦ಕ್ಕೆ ಕಣ್ಣಿನ ತಪಾಸಣಾ ಉಚಿತ ಶಿಬಿರ ಆಯೋಜಿಸಲಾಗಿದೆ.
ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಜಯರಾಮರಾಜು ಮಾತನಾಡಿ, ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಶಿಬಿರ ಮಧ್ಯಾಹ್ನ ಎರಡು ಗಂಟೆವರೆಗೂ ನಡೆಯಲಿದೆ. ಕಣ್ಣಿನ ಶಸ್ತ್ರಚಿಕಿತ್ಸೆ ಅಗತ್ಯವಿದ್ದಲ್ಲಿ ಶಿಬಿರದಿಂದಲೇ ಆಸ್ಪತ್ರೆಗೆ ಕರೆದೊಯ್ದು ರಿಯಾಯಿತಿ ದರದಲ್ಲಿ ಮಾಡಲಾಗುವುದು ಎಂದರು.
ಬೆಳಗ್ಗೆ ೧೦.೩೦ಕ್ಕೆ ಇಳೈ ಆಳ್ವಾರ್ ಸ್ವಾಮೀಜಿ, ಸಂಸದ ಪ್ರತಾಪ ಸಿಂಹ, ಶಾಸಕ ಟಿ.ಎಸ್.ಶ್ರೀವತ್ಸ ಅವರು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ ಆಯೋಜಿಸಲಾಗಿದ್ದು, ಎರಡರಿಂದ ಗಾಯನ ಕಾರ್ಯಕ್ರಮವೂ ನಡೆಯಲಿದೆ ಎಂದು ಮಾಹಿತಿ ನೀಡಿದರು.