Saturday, April 19, 2025
Google search engine

HomeUncategorizedರಾಷ್ಟ್ರೀಯಕೇಂದ್ರದಲ್ಲಿ ಆಗಸ್ಟ್​​ ವೇಳೆಗೆ ಮೋದಿ ಸರ್ಕಾರದ ಪತನ; ಲಾಲು ಪ್ರಸಾದ್ ಯಾದವ್ ಸ್ಫೋಟಕ ಹೇಳಿಕೆ

ಕೇಂದ್ರದಲ್ಲಿ ಆಗಸ್ಟ್​​ ವೇಳೆಗೆ ಮೋದಿ ಸರ್ಕಾರದ ಪತನ; ಲಾಲು ಪ್ರಸಾದ್ ಯಾದವ್ ಸ್ಫೋಟಕ ಹೇಳಿಕೆ

ಪಾಟ್ನಾ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಗಸ್ಟ್ ವೇಳೆಗೆ ಪತನವಾಗಬಹುದು ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ದೇಶದಲ್ಲಿ ಅವಧಿಗೂ ಮುನ್ನ ಚುನಾವಣೆಗೆ ಸಿದ್ಧರಾಗುವಂತೆ ತನ್ನ ಪಕ್ಷದ ಸದಸ್ಯರಿಗೆ ಸೂಚನೆ ನೀಡಿರುವ ಲಾಲೂ ಯಾದವ್ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

“ಎಲ್ಲಾ ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಿರಲು ನಾನು ಮನವಿ ಮಾಡುತ್ತೇನೆ. ಏಕೆಂದರೆ ಯಾವುದೇ ಸಮಯದಲ್ಲಿ ಚುನಾವಣೆಗಳು ನಡೆಯಬಹುದು. ದೆಹಲಿಯಲ್ಲಿ ಮೋದಿ ಸರ್ಕಾರವು ತುಂಬಾ ದುರ್ಬಲವಾಗಿದೆ. ಆಗಸ್ಟ್ ವೇಳೆಗೆ ಈಗಿನ ಸರ್ಕಾರ ಪತನವಾಗಬಹುದು” ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ತಂದೆಯ ಮಾತುಗಳನ್ನು ಪ್ರತಿಧ್ವನಿಸುತ್ತಾ, ಲಾಲು ಪ್ರಸಾದ್ ಯಾದವ್ ಅವರ ಮಗ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡ ಬಿಹಾರದಲ್ಲಿ ಶೀಘ್ರ ವಿಧಾನಸಭಾ ಚುನಾವಣೆಯ ಸಾಧ್ಯತೆಯನ್ನು ಸೂಚಿಸಿದ್ದಾರೆ. ಡಿಸೆಂಬರ್ 2024 ಅಥವಾ 2025ರ ಆರಂಭದಲ್ಲಿ ಚುನಾವಣೆ ನಡೆದರೂ ಬಿಹಾರದಲ್ಲಿ ಮಹಾಘಟಬಂಧನ್ (ಇಂಡಿಯಾ ಮೈತ್ರಿ) ಸರ್ಕಾರ ರಚನೆಯಾಗುವ ಸಾಧ್ಯತೆಯನ್ನು ಅವರು ಒತ್ತಿ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 292 ಸ್ಥಾನಗಳನ್ನು ಗೆದ್ದಿತ್ತು. ಆಪ್ ಮೈತ್ರಿಕೂಟ – ಇಂಡಿಯಾ ಬಣ 232 ಸ್ಥಾನಗಳನ್ನು ಗಳಿಸಿತ್ತು.

RELATED ARTICLES
- Advertisment -
Google search engine

Most Popular