Saturday, April 19, 2025
Google search engine

Homeಸಿನಿಮಾಕಿರುತೆರೆಗೆ ಖ್ಯಾತ ಹಾಸ್ಯನಟ ನರಸಿಂಹರಾಜು ಮೊಮ್ಮಗ ಎಂಟ್ರಿ

ಕಿರುತೆರೆಗೆ ಖ್ಯಾತ ಹಾಸ್ಯನಟ ನರಸಿಂಹರಾಜು ಮೊಮ್ಮಗ ಎಂಟ್ರಿ

ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ.

‘ಅಶ್ವಿನಿ ನಕ್ಷತ್ರ’ದಿಂದ ಹೆಸರಾದ ಮಯೂರಿ ತುಂಬಾ ವರ್ಷಗಳ ನಂತರ ಟಿವಿಗೆ ಮರಳಿ `ನನ್ನ ದೇವ್ರು’ ನಾಯಕಿಯಾಗಿದ್ದಾರೆ. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ ನರ್ಸ್ ಪಾತ್ರ. ಊರೇ ಮೆಚ್ಚುವ ಉದ್ಯಮಿ ಸಚ್ಚಿದಾನಂದಗೆ ಸೇರಿದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಬಡ ಹುಡುಗಿ ಮಯೂರಿ. ಜನಾನುರಾಗಿ ಸಚ್ಚಿದಾನಂದನ ಇಪ್ಪತ್ತು ವರ್ಷದ ಮಗಳಿಗೆ ಅಪ್ಪನನ್ನು ಕಂಡರೆ ಇಷ್ಟವಿಲ್ಲ. ತನ್ನಿಂದ ದೂರಾಗಿ ಬದುಕುತ್ತಿರುವ ಮಗಳ ವಿಶ್ವಾಸವನ್ನು ಮರಳಿ ಗಳಿಸಿಕೊಳ್ಳಲು ಹಂಬಲಿಸುತ್ತಿರುವ ಸಚ್ಚಿದಾನಂದನ ಬದುಕಲ್ಲಿ ಮಯೂರಿಯ ಪ್ರವೇಶವಾಗುತ್ತದೆ. ತಾನು ಆರಾಧಿಸುವ ಸಚ್ಚಿದಾನಂದ್ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕತೆ. ಸುತ್ತಲಿನವರ ಸಂಚುಗಳಿಂದ ಮಯೂರಿ ಹೇಗೆ ಸಚ್ಚಿದಾನಂದನನ್ನು ಕಾಪಾಡುತ್ತಾಳೆ ಎಂಬುದು ಕುತೂಹಲ.

ನಾಯಕನಾಗಿ ನಟಿಸುತ್ತಿರುವ ಅವಿನಾಶ್ ದಿವಾಕರ್ ( ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ ಅನ್ನುವುದು ಇನ್ನೊಂದು ವಿಶೇಷ. ಇವರೊಟ್ಟಿಗೆ ಯುಕ್ತಾ ಮಲ್ನಾಡ್, ಸ್ವಾತಿ, ವಿ ಮನೋಹರ್, ರೇಖಾದಾಸ್, ನಿಶ್ಚಿತಾ ಗೌಡ, ಮಾಲತಿ ಸುಧೀರ್, ಯಮುನಾ ಶ್ರೀನಿಧಿ, ರವಿ ಬ್ರಹ್ಮ, ಅಭಿಷೇಕ್ ಶ್ರೀಕಾಂತ್ ಹೀಗೆ ‘ನನ್ನ ದೇವ್ರು’ ತಾರಾಗಣದಲ್ಲಿ ಜನಪ್ರಿಯ ನಟ ನಟಿಯರು ತುಂಬಾನೇ ಇದ್ದಾರೆ.

ಈ ಮೊದಲು ‘ಒಲವಿನ ನಿಲ್ದಾಣ’ ಧಾರಾವಾಹಿಯನ್ನು ನಿರ್ಮಿಸಿದ್ದ ಶ್ರುತಿ ನಾಯ್ಡು, ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ಮಿಸಿದ್ದಾರೆ. ಇತ್ತೀಚಿಗೆ ಬೆಳ್ಳಿತೆರೆಯ ಮೇಲೆ ಖಳನಟನಾಗಿ ಗಮನ ಸೆಳೆಯುತ್ತಿರುವ ರಮೇಶ್ ಇಂದಿರಾ ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ.

ಜುಲೈ 8ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ಆರೂ ವರೆಗೆ ವೀಕ್ಷಿಸಬಹುದು.ಇದೇ ಜುಲೈ 8ರ ಸಂಜೆ ಆರೂವರೆಗೆ ‘ನನ್ನ ದೇವ್ರು’ ಧಾರಾವಾಹಿಯ ಮೊದಲ ಕಂತು ಪ್ರಸಾರವಾಗಲಿದೆ ಇದನ್ನು ನೀವು ಜಿಯೋ ಸಿನಿಮಾ ಮುಖಾಂತರ ನಿಮ್ಮ ಫೋನಿನಲ್ಲೂ ನೋಡಬಹುದಾಗಿದೆ.

RELATED ARTICLES
- Advertisment -
Google search engine

Most Popular