Friday, April 11, 2025
Google search engine

Homeಸಿನಿಮಾಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಚೆನ್ನೈ: ಖ್ಯಾತ ಹಿನ್ನೆಲೆ ಗಾಯಕಿ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಪಿ.ಸುಶೀಲಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.

ಪಿ ಸುಶೀಲಾ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು ಶನಿವಾರ ತಡರಾತ್ರಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಈ ಕುರುತು ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯರು ಸುಶೀಲಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರಿಗೆ ಸೂಕ್ತ ಔಷಧಿ ನೀಡಲಾಗಿದ್ದು ಇದೀಗ ಅವರ ಹೊಟ್ಟೆ ನೋವು ಕಡಿಮೆಯಾಗಿದೆ ಅಲ್ಲದೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಪಿ. ಸುಶೀಲಾ ಅವರು ಅಸಂಖ್ಯಾತ ಹಾಡುಗಳನ್ನು ಹಾಡಿದ್ದಾರೆ. ಸಂಗೀತ ಲೋಕದಲ್ಲಿ ಅವರು ತಮ್ಮದೇ ಆದ ವಿಶೇಷ ಸ್ಥಾನವನ್ನು ಗಳಿಸಿದ್ದಾರೆ.

ವಿವಿಧ ಭಾಷೆಗಳಲ್ಲಿ ಹಾಡುಗಳನ್ನು ಹಾಡುವ ಮೂಲಕ ಪಿ. ಸುಶೀಲ ಅವರು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್, ಏಷಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

RELATED ARTICLES
- Advertisment -
Google search engine

Most Popular