ದೆಹಲಿ: ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ ಇಂದು ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರಿರುವುದರಿಂದ ಪಕ್ಷವು ಚುನಾವಣೆಯ ದೊಡ್ಡ ಜವಾಬ್ದಾರಿಯನ್ನು ನೀಡಬಹುದು ಎಂದು ತಜ್ಞರು ಹೇಳುತ್ತಾರೆ. ಬಿಜೆಪಿ ಪಕ್ಷದ ಸ್ಟಾರ್ ಚುನಾವಣಾ ಪ್ರಚಾರಕ್ಕೂ ಅನುರಾಧಾ ಬರಬಹುದು ಎಂದು ನಿರೀಕ್ಷಿಸಲಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿದಂತೆ ಅದರ ಹಿರಿಯ ನಾಯಕರ ಸಮ್ಮುಖದಲ್ಲಿ ಗಾಯಕಿ ಬಿಜೆಪಿ ಸೇರಿದ್ದಾರೆ. ಸನಾತನ ಧರ್ಮದೊಂದಿಗೆ ಗಾಢವಾದ ಸಂಪರ್ಕ ಹೊಂದಿರುವ ಸರ್ಕಾರವನ್ನು ಸೇರಲು ನನಗೆ ಸಂತೋಷವಾಗಿದೆ ಎಂದು ಪೌಡ್ವಾಲ್ ಹೇಳಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಮುಖಂಡರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದು, ಮೋದಿ ನೇತೃತ್ವದ ಪಕ್ಷಕ್ಕೆ ಸೇರಲು ನನಗೆ ಸಂತೋಷವಾಗಿದೆ ಎಂದು ಹೇಳಿದರು. ಸನಾತನ (ಧರ್ಮ) ದೊಂದಿಗೆ ಗಾಢವಾದ ಸಂಬಂಧ ಹೊಂದಿರುವ ಸರ್ಕಾರಕ್ಕೆ ನಾನು ಸೇರ್ಪಡೆಯಾಗುತ್ತಿರುವುದು ನನಗೆ ಖುಷಿ ತಂದಿದೆ.ಇಂದು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ನನ್ನ ಸೌಭಾಗ್ಯ ಎಂದು ಹೇಳಿದ್ದಾರೆ.