Thursday, April 3, 2025
Google search engine

Homeಸಿನಿಮಾಖ್ಯಾತ ಗಾಯಕ ಸೋನು ನಿಗಮ್ ಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

ಖ್ಯಾತ ಗಾಯಕ ಸೋನು ನಿಗಮ್ ಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

ಮುಂಬೈ : ಲೈವ್ ಪ್ರದರ್ಶನದ ವೇಳೆಯೇ ಖ್ಯಾತ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಲೈವ್ ಪ್ರದರ್ಶನದ ಸಮಯದಲ್ಲಿ ಅವರು ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದರು. ತೀವ್ರ ಬೆನ್ನುನೋವಿನ ಹೊರತಾಗಿಯೂ ಅವರು ತಮ್ಮ ಪ್ರದರ್ಶನವನ್ನು ಮುಂದುವರಿಸಿದರು. ನೋವು ಉಲ್ಬಣಿವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋನು ನಿಗಮ್ ತಮ್ಮ ಇನ್ಸ್ಟಾಗ್ರಾಮ್ ವೀಡಿಯೊವನ್ನು ಪೋಸ್ಟ್ ಮಾಡಿ, ತಮ್ಮ ನೋವನ್ನು ವಿವರಿಸಿದ್ದಾರೆ. “ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನೋವು ಕಾಣಿಸಿಕೊಂಡಿತು. ಆದರೆ, ಹೇಗೋ ಮ್ಯಾನೇಜ್ ಮಾಡಿದೆ. ಜನರು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ’ ಎಂದು ಅವರು ಹೇಳಿದ್ದಾರೆ.

ಅತಿಯಾದ ನೋವು ಕಾಣಿಸಿತ್ತು. ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಕಿತ್ತು ಬರುತ್ತಿತ್ತು’ ಎಂದು ಅವರು ಹೇಳಿರೋ ಅವರು ವಿಡಿಯೋ ಕ್ಯಾಪ್ಶನ್​ನಲ್ಲಿ ‘ರಾತ್ರಿ ಸರಸ್ವತಿ ನನ್ನ ಕೈ ಹಿಡಿದರು’ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular