ಚೆನ್ನೈ: ತಮಿಳಿನ ಖ್ಯಾತ ನಟ ಹಾಗೂ ನಿರ್ದೇಶಕ ಜಿ. ಮಾರಿಮುತ್ತು ಅವರು ಹೃದಯಾಘಾತದಿಂದ ಇಂದು (ಸೆ. 8) ಮೃತಪಟ್ಟಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.
ಯೂಟ್ಯೂಬ್ ಸೆನ್ಸೇಶನ್ ಆಗಿದ್ದ ಮಾರಿಮುತ್ತು ಇತ್ತೀಚೆಗೆ ರಜಿನಿಕಾಂತ್ ಅವರ ಜೈಲರ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಅವರ ಸಾವಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.
ಶುಕ್ರವಾರ ಬೆಳಿಗ್ಗೆ ಮಾರಿಮುತ್ತು ಅವರು ಟಿವಿ ಶೋ ಒಂದರ ಡಬ್ಬಿಂಗ್ ನಲ್ಲಿ ಭಾಗಿ ಆಗಿದ್ದರು. ಚೆನ್ನೈನ ಸ್ಟುಡಿಯೋದಲ್ಲಿ ಈ ಡಬ್ಬಿಂಗ್ ಕೆಲಸ ನಡೆಯುತ್ತಿತ್ತು. ಅವರು ಡಬ್ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದು, ಅಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ತೆಗೆದುಕೊಂಡು ಹೋಗಲಾಯಿತು. ಆದರೆ, ಆಗಲೇ ಅವರು ಮೃತಪಟ್ಟಿದ್ದರು. ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಮೃತದೇಹವನ್ನು ಸ್ಥಳಾಂತರಿಸಲಾಗಿದೆ.