ವರದಿ :ಸ್ಟೀಫನ್ ಜೇಮ್ಸ್.
ಬೆಳಗಾವಿ
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ, ದಲಿತ ಮುಖ್ಯಮಂತ್ರಿಯ ಕೂಗಿನ ಕಾವು ಹೆಚ್ಚಾದ ನಡುವೆ ಬೆಳಗಾವಿಯಲ್ಲಿ ಡಾ. ಜಿ. ಪರಮೇಶ್ವರ ಮುಂದಿನ ಮುಖ್ಯಮಂತ್ರಿ ಎಂಬ ಜೈಕಾರ ಹಾಕಿದ ಘಟನೆ ಬುಧವಾರ ನಡೆದಿದೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಶಿವ ಬಸವ ನಗರದಲ್ಲಿ ತೆರಳಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಅವರ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಜಿ.ಪರಮೇಶ್ವರ ಎಂಬ ಘೋಷಣೆ ಕೂಗಿ ಹೂವಿನ ಸುರಿಮಳೆ ಸುರಿಸಿ ಅಭಿಮಾನ ವ್ಯಕ್ತಪಡಿಸಿದರು.



