ಮಂಡ್ಯ: ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ರೈತ ಮಹಿಳೆ ಕಣ್ಣೀರು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ಮಂಡ್ಯ ಜಿಲ್ಲೆಯ ರೈತರಿಗೆ ಸುಪ್ರೀಂ ತೀರ್ಪು ಮರಣ ಶಾಸನ ಬರೆದಿದೆ. ನಾವು ಕುಡಿಯೋಕೆ ನೀರು ಕೇಳ್ತಿದ್ದೇವೆ. ತಮಿಳುನಾಡಿನವರು ಮೂರನೇ ಬೆಳೆಗೆ ನೀರು ಕೇಳ್ತಿದ್ದಾರೆ. ವಾಸ್ತವ ಸ್ಥಿತಿ ಅರಿಯದೆ ಸುಪ್ರೀಂ ಕೋರ್ಟ್ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ತೀರ್ಪು ನೀಡಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧ ರೈತ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡಬಾರದು. ಎಲ್ಲಾ ಜನಪ್ರತಿನಿಧಿಗಳು ಸಾಮೂಹಿಕ ರಾಜೀನಾಮೆ ನೀಡಬೇಕೆಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.